Advertisement

ಶಿವಮೊಗ್ಗ: ಶಾಲೆಗಳಲ್ಲಿ ಯೋಗ ಶಿಕ್ಷಣ ಕಡ್ಡಾಯಗೊಳಿಸಲು ಚಿಂತನೆ; ಕೆ.ಎಸ್.ಈಶ್ವರಪ್ಪ

01:53 PM Dec 23, 2020 | Mithun PG |

ಶಿವಮೊಗ್ಗ:  ಜಿಲ್ಲೆಯ ಶಾಲೆಗಳಲ್ಲಿ ಯೋಗ ಶಿಕ್ಷಣ ಕಡ್ಡಾಯಗೊಳಿಸಲು ಚಿಂತನೆ ನಡೆಸಲಾಗಿದೆ. ಕೋವಿಡ್  ಸಂದರ್ಭದಲ್ಲಿ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸದೃಢಗೊಳಿಸಲು ಯೋಗ ಪೂರಕ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

Advertisement

ಜಿಲ್ಲಾಧಿಕಾರಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಶಾಲೆಗಳಲ್ಲಿ ಯೋಗ ಶಿಕ್ಷಣ ಕಡ್ಡಾಯಗೊಳಿಸಲಾಗುವುದು. ಇದಲ್ಲದೆ ಕೋವಿಡ್  ಎರಡನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬಂದವರ ಮೇಲೆ ನಿಗಾ ಇಡಲಾಗುವುದು. ಈಗಾಗಲೇ ವಿದೇಶದಿಂದ ಬಂದವರನ್ನು ಕ್ವಾರಂಟೈನ್ ನಲ್ಲಿರಿಸಲಾಗಿದೆ.

ನಾಳೆ ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ವಿದೇಶದಿಂದ ಬಂದವರಿಗೆ ಯಾವ ರೀತಿ ಚಿಕಿತ್ಸೆ ನೀಡಬೇಕು, ಅವರನ್ನು ಎಲ್ಲಿ ಕ್ವಾರಂಟೈನ್ ಮಾಡಬೇಕು ಎಂದು ನಿರ್ಧರಿಸಲಾಗುವುದು ಎಂದು ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯಾಂದ್ಯಂತ 9 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿ; ಹೊಸ ವರ್ಷಾಚರಣೆಗೆ ಬ್ರೇಕ್ !

Advertisement

Udayavani is now on Telegram. Click here to join our channel and stay updated with the latest news.

Next