Advertisement

ಅಗ್ನಿ ಅವಘಡ ತಡೆಗೆ ಸೂಕ್ತ ಮುನ್ನೆಚ್ಚರಿಕೆ ಅಗತ್ಯ

11:44 AM Feb 05, 2020 | Naveen |

ಶಿವಮೊಗ್ಗ: ಪ್ರಾಕೃತಿಕ ವಿಕೋಪಗಳಲ್ಲಿ ಅಗ್ನಿ ಅವಘಡವೂ ಸಹ ಒಂದಾಗಿದ್ದು ಈ ರೀತಿಯ ಸಂದರ್ಭದಲ್ಲಿ ಯಾವ ರೀತಿಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಹಾಗೂ ಆತ್ಮರಕ್ಷಣೆ ಹೇಗೆ ಮಾಡಿಕೊಳ್ಳಬೇಕು ಎನ್ನುವುದರ ಬಗ್ಗೆ ಜ್ಞಾನ ಅತ್ಯಗತ್ಯ ಎಂದು ಪಿಇಎಸ್‌ ಐಎಎಂಎಸ್‌ ಕಾಲೇಜಿನ ಪ್ರಾಂಶುಪಾಲೆ ಡಾ| ಕೆ. ಸಾಯಿಲತಾ ತಿಳಿಸಿದರು.

Advertisement

ಯುವ ರೆಡ್‌ಕ್ರಾಸ್‌ ವತಿಯಿಂದ ಪಿಇಎಸ್‌ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಪ್ರಥಮ ಚಿಕಿತ್ಸೆ, ಅಗ್ನಿ ಅವಘಡ ಹಾಗೂ ತುರ್ತು ಸಂದರ್ಭಗಳಲ್ಲಿನ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಗ್ನಿ ಅವಘಡಗಳು ಸಂಭವಿಸಿದಾಗ ಆತ್ಮವಿಶ್ವಾಸ, ಧೈರ್ಯದಿಂದ ಇರುವುದರೊಂದಿಗೆ ಆತ್ಮರಕ್ಷಣೆಯ ಕೌಶಲ್ಯಗಳನ್ನು ಅರಿತಾಗ ತಾವು ಅಪಾಯದಿಂದ ಪಾರಾಗುವುದರ ಜೊತೆಗೆ ಹಲವು ಜೀವಗಳನ್ನು ಉಳಿಸಬಹುದು. ಪ್ರಾಕೃತಿಕ ವಿಕೋಪಗಳು ಸಂಭವಿಸಿದಾಗ ಸರ್ಕಾರಗಳು ತಕ್ಷಣ ಸ್ಪಂದಿಸಿ ಜೀವಹಾನಿ ತಪ್ಪಿಸುವ ಪ್ರಯತ್ನ ಮಾಡುತ್ತಿವೆ. ಇದಕ್ಕೆ ಎನ್‌ಜಿಒಗಳು ಸಹ ಸಹಕಾರ ನೀಡುತ್ತಿವೆ. ಪ್ರತಿಯೊಬ್ಬ ನಾಗರಿಕರು ಕೂಡ ಪ್ರಾಕೃತಿಕ ವಿಕೋಪದ ಸಂದರ್ಭಗಳಲ್ಲಿ ತಮ್ಮ ಜವಾಬ್ದಾರಿಗಳನ್ನು ಅರಿತು ಇನ್ನೊಬ್ಬರಿಗೆ ನೆರವಾಗಬೇಕು ಎಂದರು.

ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಘಟಕದ ಅಧಿಕಾರಿ ಪ್ರವೀಣ್‌ ಕೆ.ಎನ್‌. ಮಾತನಾಡಿ, ಇಂದು ಅಗ್ನಿ ಅವಘಡಗಳು ಹೆಚ್ಚುತ್ತಿವೆ. ಶಿವಮೊಗ್ಗದಲ್ಲಿ ಕಳೆದ ವರ್ಷದಲ್ಲಿ 220 ಅಗ್ನಿ ಅವಘಡಗಳು ದಾಖಲಾಗಿವೆ. ಈ ಕುರಿತ ಜಾಗೃತಿಯನ್ನು ನಾವು ಜನರಲ್ಲಿ ಮೂಡಿಸುವ ಯತ್ನ ಮಾಡುತ್ತಾ ಬಂದಿದ್ದೇವೆ ಎಂದು ತಿಳಿಸಿದ ಅವರು ಬೆಂಕಿ ಆರಿಸುವ ಕುರಿತು ಪ್ರಾತ್ಯಕ್ಷಿಕೆಯನ್ನು ಸಹ ನೆರವೇರಿಸಿಕೊಟ್ಟರು.

ವಾಣಿಜ್ಯ ಹಾಗೂ ನಿರ್ವಹಣಾ ಶಾಸ್ತ್ರದ ಮುಖ್ಯಸ್ಥ ಡಾ| ಜಿ.ಎಂ.ಸುದರ್ಶನ್‌ ಮಾತನಾಡಿ, ಬೆಂಕಿ ಅವಘಡಗಳು ಯಾವಾಗ ಬೇಕಾದರೂ ಸಂಭವಿಸಬಹುದು, ಅಕ್ಷರ ಕೌಶಲ್ಯ, ತಾಂತ್ರಿಕ ಕೌಶಲ್ಯದ ಜೊತೆಗೆ ಆತ್ಮ ರಕ್ಷಣೆಯ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕೆಂದು ಹೇಳುವುದರ ಜೊತೆಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.

Advertisement

ಕಾರ್ಯಕ್ರಮದಲ್ಲಿ ಯುವ ರೆಡ್‌ಕ್ರಾಸ್‌ ಘಟಕದ ಕಾರ್ಯಕ್ರಮಾ ಧಿಕಾರಿ ಪ್ರವೀಣ್‌ ಬಿ. ಹಾಗೂ ಬೋಧಕ ಬೋಧಕೇತರ ವರ್ಗದವರು ಮತ್ತು ವಿದ್ಯಾರ್ಥಿಗಳು ಇದ್ದರು. ಅನುಷ ಎ.ಸಿ. ಕಾರ್ಯಕ್ರಮ ನಿರೂಪಿಸಿದರು. ಐಶ್ವರ್ಯ ಪ್ರಾರ್ಥಿಸಿದರು. ಕಾವ್ಯಶ್ರೀ ಸ್ವಾಗತಿಸಿದರು. ರಕ್ಷಿತ್‌ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next