Advertisement

Shimoga; ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ ಆರೋಪ

11:03 AM Jun 29, 2024 | Team Udayavani |

ಶಿವಮೊಗ್ಗ: ರಾಜ್ಯದಲ್ಲಿ ಇಷ್ಟು ದೊಡ್ಡ ಮಟ್ಟದ ಹಗರಣ ನಡೆದಿದೆ. ವಾಲ್ಮೀಕಿ ಸಮಾಜಕ್ಕೆ ಮೀಸಲಿಟ್ಟ ಹಣವನ್ನು ಸರ್ಕಾರ ಲೂಟಿ ಮಾಡಿದೆ. ಸರ್ಕಾರಿ ಹಣ ಲೂಟಿ ಮಾಡಿರುವ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಶರಣ ಪ್ರಕಾಶ್ ಪಾಟೀಲ್, ಬೋರ್ಡ್ ಅಧ್ಯಕ್ಷರು ಸೇರಿ ಮುಖ್ಯಮಂತ್ರಿ ಗಳು ಸಹ ರಾಜೀನಾಮೆ ಕೊಡಬೇಕಾಗುತ್ತದೆ. ಸಿಎಂ ಅವರೇ ಹಣಕಾಸಿನ ಸಚಿವರಾಗಿದ್ದಾರೆ. ಅವರ ಗಮನಕ್ಕೆ ಬಾರದೆ ಇಷ್ಟು ದೊಡ್ಡ ಹಗರಣ ನಡೆಯಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲಿ ಇಂತಹ ದೊಡ್ಡ ಹಗರಣ ನಡೆದಿಲ್ಲ. ಲೋಕಸಭಾ ಚುನಾವಣೆ ನಡೆಯುವ ಸಂದರ್ಭದಲ್ಲಿ ಇಷ್ಟೊಂದು ದೊಡ್ಡ ಹಗರಣವಾಗಿದೆ. ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣ ದುರುಪಯೋಗವಾಗಿದೆ. ಲೋಕಸಭೆ ಚುನಾವಣೆಗೆ ಈ ಹಣ ಉಪಯೋಗ ಆಗಿದೆ ಎನ್ನುವ ಚರ್ಚೆ ಮಾಡಿದ್ದಾರೆ ಎಂದರು.

ಸಿಎಂ ನಿವಾಸಕ್ಕೆ ಮುತ್ತಿಗೆ

ಭ್ರಷ್ಟಾಚಾರದ ವಿರುದ್ಧ ಬಿಜೆಪಿ ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹೋರಾಟ ಮಾಡಿಕೊಂಡು ಬಂದಿದೆ. ಹೋರಾಟದ ಫಲ ನಾಗೇಂದ್ರ ರಾಜೀನಾಮೆ ಕೊಡಬೇಕಾಯಿತು. ಚಂದ್ರಶೇಖರ ಡೇತ್ ನೋಟ್ ನಲ್ಲಿ ಅನೇಕ ಅಂಶ ಉಲ್ಲೇಖ ಆಗಿದೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ. ನಿನ್ನೆ ಸಹ ರಾಜ್ಯಾದ್ಯಂತ ಹೋರಾಟ ಮಾಡಿದ್ದೇವೆ. ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವ ಕೆಲಸ ಮಾಡಿದ್ದೇವೆ. ಜುಲೈ 3 ರಂದು ಮಂಗಳವಾರ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ ಎಂದರು.

ಸತ್ಯನಾರಾಯಣ ಶರ್ಮ ಅವರಿಗೆ ಕೊಲೆ ಬೆದರಿಕೆ ಬರುತ್ತಿದೆ ಎಂದಿದ್ದಾರೆ. ಸಾವಿರಾರು ಅಕೌಂಟ್ ಓಪನ್ ಮಾಡಿ ಹಣ ವರ್ಗಾವಣೆ ಮಾಡಿದ್ದಾರೆ. ಘಟನೆ ನಡೆದು ಇಷ್ಟು ದಿನವಾದರೂ ಎಸ್ಐಟಿ ತನಿಖೆಗೆ ಇಲ್ಲಿಯವರೆಗೆ ನೀಡಿಲ್ಲ. ಸಿಎಂ ತಮ್ಮ ಬುಡಕ್ಕೆ ಬರುತ್ತದೆಂದು ಅವರ ಸರ್ಕಾರ ಉಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಸಿಎಂ ಸಮ್ಮತಿಯಿಲ್ಲದೆ ಇಲ್ಲದೆ ಇಷ್ಟೊಂದು ದೊಡ್ಡ ಹಗರಣ ನಡೆದಿದೆಯಾ ಎಂದು ವಿಜಯೇಂದ್ರ ಪ್ರಶ್ನಿಸಿದರು.

Advertisement

ಲೋಕಸಭಾ ಸಭೆ ತನಕ ಒಗ್ಗಟಿನ ಪ್ರದರ್ಶನ ಮಾಡುತ್ತಿದ್ದರು. ಈಗ ಹಾದಿ- ಬೀದಿಯಲ್ಲಿ ಸಿಎಂ – ಡಿಸಿಎಂ ಬಗ್ಗೆ ಚರ್ಚೆಯಾಗುತ್ತಿದೆ. ಮುಖ್ಯಮಂತ್ರಿ ಬದಲಾಗಬೇಕು ಎಂದು ಚರ್ಚೆಯಾಗುತ್ತಿದೆ. ರಾಜ್ಯದ ಜನರ ಪಾಲಿಗೆ ಸರ್ಕಾರ ಶಾಪವಾಗಿದೆ. ರೈತರ ಬಗ್ಗೆ ಈ ಸರ್ಕಾರಕ್ಕೆ ಕಾಳಜಿ ಇಲ್ಲ. ಇಂತಹ ಸಂದರ್ಭದಲ್ಲಿ ಬೆಲೆ ಏರಿಕೆ ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next