Advertisement

Shimoga; ಡೆಂಗ್ಯೂ ಉಲ್ಭಣ ಹಿನ್ನೆಲೆ ಶಿರಾಳಕೊಪ್ಪ ಪಿಎಚ್‌ಸಿಗೆ ವಿಜಯೇಂದ್ರ ದಿಢೀರ್ ಭೇಟಿ

07:21 PM Jul 09, 2024 | keerthan |

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಭಾಗದಲ್ಲಿ ಡೆಂಗ್ಯೂ ಕಾಯಿಲೆ ಉಲ್ಬಣವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರು ಹಾಗೂ ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಅವರು ಶಿರಾಳಕೊಪ್ಪ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

Advertisement

ಅನಾರೋಗ್ಯ ಪೀಡಿತ ಜನರಿಗೆ ಉತ್ತಮ ಸೇವೆಯನ್ನು ವೈದ್ಯರು ನೀಡಬೇಕು ಅನಾವಶ್ಯಕವಾಗಿ ಖಾಸಗಿ ಆಸ್ಪತ್ರೆಗಳಿಗೆ ಶಿಫಾರಸ್ಸು ಮಾಡಬಾರದು. ಸಾಧ್ಯವಾದಷ್ಟು ಸರ್ಕಾರಿ ಆಸ್ಪತ್ರೆಯಲ್ಲಿಯೇ ಬಡವರಿಗೆ ಚಿಕಿತ್ಸೆ ನೀಡಬೇಕು. ಆರೋಗ್ಯ ಸಿಬ್ಬಂದಿ ಜನರ ಬಗ್ಗೆ ಕಾಳಜಿ ವಹಿಸಿ ಕೆಲಸ ಮಾಡಬೇಕು. ನಿರ್ಲಕ್ಷ್ಯ ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವುದಾಗಿ ಎಚ್ಚರಿಸಿದರು.

ಅನಾರೋಗ್ಯ ಪಿಡಿತರನ್ನು ಮಾತನಾಡಿಸಿ ಆಸ್ಪತ್ರೆಯಲ್ಲಿ ಲಭಿಸುತ್ತಿರುವ ಸೇವೆ ಮತ್ತು ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು. ನಂತರ ನೂತನವಾಗಿ ನಿರ್ಮಾಣವಾಗುತ್ತಿರುವ 50 ಹಾಸಿಗೆಯ ಆಸ್ಪತ್ರೆಗೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆಸ್ಪತ್ರೆಗೆ ಬೇಕಾಗಿರುವ ಮೂಲ ಸೌಕರ್ಯಗಳ ಪಟ್ಟಿ ಹಾಗೂ ಅವಶ್ಯಕತೆ ಇರುವ ಸಿಬ್ಬಂದಿಯ ಪಟ್ಟಿಯನ್ನು ನೀಡಿ, ಸರ್ಕಾರದಿಂದ ಮಂಜೂರು ಮಾಡಿಸುವುದಾಗಿ ವೈದ್ಯಾಧಿಕಾರಿಗಳಿಗೆ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next