Advertisement

ಶಿವಮೊಗ್ಗ : ಗೋಡೆ ಕುಸಿದು ವೃದ್ಧ ಸಾವು

12:46 PM Oct 26, 2019 | Suhan S |

ಶಿವಮೊಗ್ಗ : ಧಾರಕಾರ ಮಳೆ ಸುರಿದ ಪರಿಣಾಮ ಮನೆಯ ಗೋಡೆ ಕುಸಿದು ವೃದ್ಧ ಸಾವನ್ನಪ್ಪಿರುವ ಘಟನೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಸಮೀಪದ ಅರಬಿಳಚಿ ಗ್ರಾಮದಲ್ಲಿ ಘಟನೆ ನಡೆದಿದೆ.

Advertisement

ಲಕ್ಷ್ಮಣ (70) ಮೃತ ಪಟ್ಟಿರುವ ವೃದ್ಧ. ರಾತ್ರಿ ಮಲಗಿದ್ದ ವೇಳೆ ಲಕ್ಷ್ಮಣ ಅವರ ಮೇಲೆ ಗೋಡೆ ಕುಸಿದು ಬಿದ್ದ ಪರಿಣಾಮ ತಲೆಗೆ ಗಂಭೀರ ಪೆಟ್ಟಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕಳೆದ ಮೂರು ದಿನದಿಂದ ಧಾರಾಕಾರವಾಗಿ ಮಳೆ‌ ಸುರಿದಿದ್ದರಿಂದ ಒದ್ದೆಯಾಗಿ ಗೋಡೆ ಕುಸಿದು ಬಿದ್ದಿದೆ ಎನ್ನಲಾಗಿದೆ.

ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,  ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next