Advertisement

ಯೋಜನೆ ಅನುಷ್ಠಾನವಾಗಲಿ

05:16 PM Jan 12, 2020 | Naveen |

ಶಿವಮೊಗ್ಗ: ಗ್ರಾಮೀಣ ಪ್ರದೇಶಗಳಲ್ಲಿ ಯೋಜನೆಗಳ ಅನುಷ್ಠಾನದಲ್ಲಿನ ತೊಂದರೆಗಳ ಬಗ್ಗೆ ನೇರವಾಗಿ ತಮ್ಮ ಗಮನಕ್ಕೆ ತರುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಸೂಚನೆ ನೀಡಿದರು.

Advertisement

ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಪಂಚಾಯತ್‌ ರಾಜ್‌ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ರೈತರ ಅಭಿವೃದ್ಧಿಯಾದರೆ ಮಾತ್ರ ಹಳ್ಳಿಗಳ ಅಭಿವೃದ್ಧಿಯಾಗಲು ಸಾಧ್ಯ. ಹಳ್ಳಿ ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿ. ಹೀಗಾಗಿ ಗ್ರಾಮೀಣ ಅಭಿವೃದ್ಧಿ ಕಾರ್ಯಗಳ ಅನುಷ್ಠಾನದಲ್ಲಿ ಪಂಚಾಯತ್‌ ರಾಜ್‌ ಅಧಿಕಾರಿಗಳ ಪಾತ್ರ ಬಹಳ ಪ್ರಮುಖವಾದ್ದುದು. ಸರ್ಕಾರದ ಸೌಲಭ್ಯಗಳನ್ನು ಗ್ರಾಮೀಣ ಪ್ರದೇಶದ ಜನರಿಗೆ ತಲುಪಿಸುವಲ್ಲಿ ಪಿಡಿಒಗಳು ಕೊಂಡಿಯಾಗಿ ಕಾರ್ಯ ನಿರ್ವಹಿಸಬೇಕು ಎಂದರು.

ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ನೇರವಾಗಿ ಜನಪ್ರತಿನಿ ಧಿಗಳ ಗಮನಕ್ಕೆ ತಂದು ಸರಿಪಡಿಸಬೇಕು. ಪಿಡಿಒಗಳ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದ ಅವರು, ಅಭಿವೃದ್ಧಿ ಯೋಜನಾನುಷ್ಠಾನದಲ್ಲಿ ಯವುದೇ ರಾಜಿ ಇಲ್ಲ ಎಂದು ಎಚ್ಚರಿಸಿದರು.

ತ್ಯಾಜ್ಯ ವಿಲೇವಾರಿ ಘಟಕ ಪ್ರಾರಂಭಿಸಲು ಒತ್ತು ಎಲ್ಲಾ ಗ್ರಾಪಂಗಳ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಆರಂಭಿಸಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಜಿಲ್ಲೆಯ 271 ಗ್ರಾಪಂಗಳ ಪೈಕಿ ಕೇವಲ 19 ಪಂಚಾಯತ್‌ ವ್ಯಾಪ್ತಿಯಲ್ಲಿ ವಿಲೇವಾರಿ ಘಟಕಕ್ಕೆ ಜಮೀನು ಗುರುತಿಸಲಾಗಿದೆ ಎಂದ ಅವರು, ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಜಮೀನು ಗುರುತಿಸಿ ಘಟಕವನ್ನು ಆದಷ್ಟು ಬೇಗನೆ ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಈ ಬಾರಿಯ ಬಜೆಟ್‌ನಲ್ಲಿ ನಿರ್ಮಾಣದ ಸಹಾಯಧನವನ್ನು ಹೆಚ್ಚಿಸಲು ಪ್ರಯತ್ನಿಸಲಾಗುವುದು. ಇದೇ ರೀತಿ ಸಾಮೂಹಿಕ ಶೌಚಾಲಯಗಳ ನಿರ್ವಹಣೆಗೂ
ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದ ಅವರು, ಉದ್ಯೋಗ ಖಾತ್ರಿ ಯೋಜನೆ ಬಾಕಿ ಮೊತ್ತ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

Advertisement

ಜಿಪಂ ಅಧ್ಯಕ್ಷೆ ಜ್ಯೋತಿ ಎಸ್‌. ಕುಮಾರ್‌, ಉಪಾಧ್ಯಕ್ಷೆ ವೇದಾ ವಿಜಯಕುಮಾರ್‌, ಸದಸ್ಯ ವೀರಭದ್ರಪ್ಪ ಪೂಜಾರ್‌, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಎಲ್‌. ವೈಶಾಲಿ, ಪಿಡಿಒ ಸಂಘದ ಜಿಲ್ಲಾಧ್ಯಕ್ಷ ಶ್ರೀರಾಮ್‌, ಕೇಶವ ಮೂರ್ತಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next