Advertisement

ಕುಟುಂಬದವರೊಂದಿಗೆ ಯೋಗ ದಿನ ಆಚರಿಸಿದ ಈಶ್ವರಪ್ಪ

04:34 PM Jun 22, 2020 | Naveen |

ಶಿವಮೊಗ್ಗ: ವಿಶ್ವ ಯೋಗ ದಿನಾಚರಣೆ ಅಂಗವಾಗಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ಅವರ ಮನೆಯಲ್ಲಿ ಯೋಗ ದಿನ ಆಚರಿಸಲಾಯಿತು.

Advertisement

ಪತ್ನಿ ಜಯಲಕ್ಷ್ಮೀ, ಪುತ್ರ ಕಾಂತೇಶ್‌, ಸೊಸೆ, ಮೊಮ್ಮಕ್ಕಳು ಹಾಗೂ ಸ್ನೇಹಿತರ ಜತೆ ಈಶ್ವರಪ್ಪ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಅನಂತರ ಮಾತನಾಡಿದ ಅವರು, ಯೋಗ ಭಾರತೀಯರ ಸಂಸ್ಕೃತಿ. ಇದನ್ನು ವಿಶ್ವಾದ್ಯಂತ ಪರಿಚಯಿಸಿ ಅದಕ್ಕೊಂದು ದಿನಾಚರಣೆಯನ್ನಾಗಿಸಿರುವ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಬೇಕು. ದಿನನಿತ್ಯ ಯೋಗಾಭ್ಯಾಸ ಮಾಡುವ ಮೂಲಕ ಆರೋಗ್ಯವಾಗಿರೋಣ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next