Advertisement
ಜಿಲ್ಲೆಯಲ್ಲಿ ಈ ಬಾರಿ 24,904 ವಿದ್ಯಾರ್ಥಿಗಳು ಹಾಗೂ 2 ಖಾಸಗಿ ಕೇಂದ್ರಗಳಲ್ಲಿ ಖಾಸಗಿಯಾಗಿ 610 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಸಾರಿಗೆ ವ್ಯವಸ್ಥೆ ಬಯಸಿದ ವಿದ್ಯಾರ್ಥಿಗಳಿಗಾಗಿ 142 ಖಾಸಗಿ ಬಸ್ ಹಾಗೂ 56 ಸರ್ಕಾರಿ ಬಸ್ ವ್ಯವಸ್ಥೆ ಮಾಡಲಾಗಿದೆ. ದಿನಂಪ್ರತಿ ಓಡಾಡುವ ಸರ್ಕಾರಿ ಬಸ್ ಮಾರ್ಗದ ಬಸ್‌ನಲ್ಲಿ ವಿದ್ಯಾರ್ಥಿಗಳು ಬೆಳಗ್ಗೆ 7ಕ್ಕೆ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಪ್ರಯಾಣಿಸುವ ಅವಕಾಶ ಮಾಡಲಾಗಿದೆ. ತಾತ್ಕಾಲಿಕವಾಗಿ ಹಾಸ್ಟೆಲ್ ಸೌಲಭ್ಯ ಬಯಸಿದ 773 ವಿದ್ಯಾರ್ಥಿಗಳಿಗೆ 62 ಹಾಸ್ಟೆಲ್ ಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಮೇಶ್ ತಿಳಿಸಿದ್ದಾರೆ.
Related Articles
Advertisement
ಖಾಸಗಿ ಶಾಲೆಗಳ ಮತ್ತು ಒಪ್ಪಂದದ ಮೇಲೆ ಮಾರ್ಗಗಳಲ್ಲಿ ಬರುವ ಸರ್ಕಾರಿ ಬಸ್‌ಗಳಿಗೆ ಈಗಾಗಲೇ ನೀಡಿರುವ ಸಮಯಕ್ಕೆ ಸರಿಯಾಗಿ ಸಿದ್ಧರಾಗಿ ಪಿಕ್‌ಅಪ್ ಪಾಯಿಂಟ್‌ಗಳಲ್ಲಿ ಇರಬೇಕು. ಬಸ್‌ನಲ್ಲಿ ಬರುವ ಮಕ್ಕಳು ಶಾಲೆಗೆ ಆಗಮಿಸಿದ ಬಸ್‌ನಲ್ಲೇ ವಾಪಸ್ ಹೋಗುವುದು. ಖಾಸಗಿಯಾಗಿ ಪರೀಕ್ಷೆ ತೆಗೆದುಕೊಂಡ ಖಾಸಗಿ ಅಭ್ಯರ್ಥಿಗಳಿಗೆ ಪ್ರತಿ ತಾಲೂಕು ಕೇಂದ್ರದ ಬಸ್ ನಿಲ್ದಾಣದಿಂದ ಜಿಲ್ಲಾ ಕೇಂದ್ರದಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಬಸ್ ವ್ಯವಸ್ಥೆಯನ್ನು ಮಾಡಲಾಗಿದ್ದು, ಖಾಸಗಿ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಡಿಡಿಪಿಐ ತಿಳಿಸಿದ್ದಾರೆ.