ಮುಂಬಯಿ: ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರಕ್ಕೆ ಡೆತ್ ವಾರೆಂಟ್ ಹೊರಡಿಸಲಾಗಿದ್ದು, ಮುಂದಿನ 15 – 20 ದಿನಗಳಲ್ಲಿ ಸರ್ಕಾರ ಪತನಗೊಳ್ಳಲಿದೆ ಎಂದು ಶಿವಸೇನಾ ನಾಯಕ ಸಂಜಯ್ ರಾವತ್ ರವಿವಾರ ಭವಿಷ್ಯ ನುಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,”ಫೆಬ್ರವರಿಯಲ್ಲಿ ಶಿಂಧೆ ಸರ್ಕಾರ ಪತನವಾಗಲಿದೆ ಎಂದು ನಾನು ಈಗಾಗಲೇ ಹೇಳಿದ್ದೇನೆ ಆದರೆ ಸುಪ್ರೀಂ ಕೋರ್ಟ್ ತೀರ್ಪಿನ ವಿಳಂಬದಿಂದಾಗಿ ಈ ಸರ್ಕಾರ ಮುಂದಿನ 15-20 ದಿನಗಳಲ್ಲಿ ಸರ್ಕಾರ ಪತನವಾಗಲಿದೆ” ಎಂದು ರಾವತ್ ಹೇಳಿದರು.
ಉದ್ಧವ್ ಠಾಕ್ರೆ ನಾಯಕತ್ವದ ವಿರುದ್ಧ ಬಂಡಾಯವೆದ್ದ 16 ಶಿವಸೇನೆಯ (ಶಿಂಧೆ ಪಕ್ಷ) ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ಸುಪ್ರೀಂ ಕೋರ್ಟ್‍ನಲ್ಲಿ ಬಾಕಿ ಉಳಿದಿದೆ. ತಮ್ಮ ಪಕ್ಷವು ನ್ಯಾಯಾಲಯದ ಆದೇಶಕ್ಕಾಗಿ ಕಾಯುತ್ತಿದೆ. ಜೊತೆಗೆ ನಮಗೆ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸವಿದ್ದು, ಈ ಹಿನ್ನೆಲೆಯಲ್ಲಿ ನಿರೀಕ್ಷಿಸುತ್ತಿದ್ದೇವೆ ಎಂದು ಹೇಳಿದರು.
ಈ ಸರ್ಕಾರದ ಡೆತ್ ವಾರಂಟ್ ಹೊರಡಿಸಲಾಗಿದೆ. ಇದಕ್ಕೆ ಯಾರು ಸಹಿ ಹಾಕುತ್ತಾರೆ ಎಂಬುದು ಈಗ ನಿರ್ಧಾರವಾಗಬೇಕಿದೆ ಎಂದು ತಿಳಿಸಿದರು.