Advertisement

Maharashtra Politics: ಶಿಂಧೆ ಬಣದಿಂದ ಠಾಕ್ರೆ ಬಣದತ್ತ ಶಾಸಕರು…?ಎನ್ ಸಿಪಿಯಲ್ಲೂ ಸಂಕಷ್ಟ!

11:50 AM Jun 08, 2024 | Team Udayavani |

ಮುಂಬೈ: ಲೋಕಸಭಾ ಫಲಿತಾಂಶದ ಬಳಿಕದ ವಾತಾವರಣದಿಂದ ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಗಾಳಿ ಬೀಸುವ ಲಕ್ಷಣ ಕಾಣುತ್ತಿದೆ. ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿರುವ ಏಕನಾಥ್ ಶಿಂಧೆ ಬಣದ ಶಿವಸೇನೆಯಿಂದ ಕನಿಷ್ಠ 5-6 ಶಾಸಕರು ಉದ್ಧವ್ ಠಾಕ್ರೆ ಬಣಕ್ಕೆ ಮರಳಿ ಬರಲಿದ್ದಾರೆ ಎನ್ನಲಾಗಿದೆ.

Advertisement

ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ತೀರ್ಮಾನ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿದೆ.

ಇಷ್ಟೇ ಅಲ್ಲದೆ ಅಜಿತ್ ಪವಾರ್ ಬಣದ ಎನ್ ಸಿಪಿಯ 10ರಿಂದ 15 ಮಂದಿ ಶಾಸಕರು ಶರದ್ ಪವಾರ್ ಕ್ಯಾಂಪ್ ನೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ವರದಿಯಾಗಿದೆ. ಮಹಾರಾಷ್ಟ್ರ ಅಸೆಂಬ್ಲಿ ಚುನಾವಣೆಗೆ ಕೆಲವೇ ತಿಂಗಳುಗಳ ಮುಂಚೆಯೇ ಈ ಬೆಳವಣಿಗೆ ಸಂಭವಿಸಿದೆ. ಅಜಿತ್ ಪವಾರ್ ಅವರ ಎನ್‌ಸಿಪಿ ಕೇವಲ ಒಂದು ಲೋಕಸಭಾ ಸ್ಥಾನವನ್ನು ಮಾತ್ರ ಗೆಲ್ಲು ಯಶಸ್ವಿಯಾದ ಬಳಿಕ ಈ ಬೆಳವಣಿಗೆಗಳು ನಡೆದಿದೆ.

ಎನ್‌ಸಿಪಿ (ಶರದ್‌ ಪವಾರ್) ರಾಜ್ಯ ಅಧ್ಯಕ್ಷ ಜಯಂತ್ ಪಾಟೀಲ್ ಅವರು ಯಾವುದೇ ಪಕ್ಷವನ್ನು ಹೆಸರಿಸದೆ, ಹಲವಾರು ನಾಯಕರು ತಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದರು. “ಜೂನ್ 9 ರಂದು ನಮ್ಮ ಸಭೆಯಲ್ಲಿ ನಾವು ಈ ಪ್ರಸ್ತಾಪಗಳ ಬಗ್ಗೆ ಚರ್ಚೆ ಮಾಡುತ್ತೇವೆ” ಎಂದು ಅವರು ಹೇಳಿದರು.

ಲೋಕಸಭೆಯ ಚುನಾವಣೆಯಲ್ಲಿ ಮಹಾರಾಷ್ಟ್ರ ಆಡಳಿತಾರೂಢ ಮಹಾಯುತಿ ಮೈತ್ರಿಕೂಟ ಕೇವಲ 17 ಸ್ಥಾನಗಳನ್ನು ಗಳಿಸಿದ್ದು ಹೊಸ ಬೆಳವಣಿಗೆಗಳಿಗೆ ಕಾರಣವಾಗಿದೆ.

Advertisement

ಮತ್ತೊಂದೆಡೆ, ಎರಡು ಪಕ್ಷಗಳ ಒಡಕುಗಳಿಂದ ಕಂಗೆಟ್ಟಿರುವ ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ (ಎಂವಿಎ) 30 ಸ್ಥಾನಗಳನ್ನು ಗಳಿಸಿದೆ. ಕಾಂಗ್ರೆಸ್ 13 ಸ್ಥಾನಗಳನ್ನು ಗೆದ್ದುಕೊಂಡಿತು, ಶಿವಸೇನೆ (ಯುಬಿಟಿ) ಒಂಬತ್ತು ಮತ್ತು ಎನ್‌ಸಿಪಿ (ಶರದ್ ಪವಾರ್ ಬಣ) ಎಂಟು ಸ್ಥಾನಗಳನ್ನು ಗಳಿಸಿತು.

Advertisement

Udayavani is now on Telegram. Click here to join our channel and stay updated with the latest news.

Next