Advertisement

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

06:02 PM Sep 18, 2024 | Team Udayavani |

ಮಹಾರಾಷ್ಟ್ರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಾಲಿಗೆಯನ್ನು ಕತ್ತರಿಸಿದವರಿಗೆ 11 ಲಕ್ಷ ರೂಪಾಯಿ ಬಹುಮಾನ ಘೋಷಿಸುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ ಶಿವಸೇನೆ ಶಾಸಕ ಸಂಜಯ್ ಗಾಯಕ್ವಾಡ್ ಇದೀಗ ಮತ್ತೊಮ್ಮೆ ತಮ್ಮ ನಾಲಿಗೆಯನ್ನು ಹರಿ ಬಿಟ್ಟು ಕಾಂಗ್ರೆಸ್ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಗಾಯಕ್ವಾಡ್, ಶಿವಸೇನೆಯ ಮುಖ್ಯಸ್ಥರಾಗಿರುವ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ತಮ್ಮ ಜಿಲ್ಲೆಯ ಮಹಿಳೆಯರಿಗಾಗಿ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ‘ಮುಖ್ಯಮಂತ್ರಿ ಮಾಝಿ ಲಡ್ಕಿ ಬೆಹೆನ್ ಯೋಜನೆ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಈ ವೇಳೆ ಕಾಂಗ್ರೆಸ್ ನಾಯಿ ಬಂದರೆ ಅಲ್ಲೇ ಸಮಾಧಿ ಮಾಡುವುದಾಗಿ ಬಹಿರಂಗ ಹೇಳಿಕೆ ನೀಡಿದ್ದಾರೆ.

ಇದಕ್ಕೂ ಮೊದಲು ರಾಹುಲ್ ಅವರು ಮೀಸಲಾತಿ ವಿಚಾರವಾಗಿ ನೀಡಿದ ಹೇಳಿಕೆಗೆ ಗುಡುಗಿದ ಗಾಯಕ್ವಾಡ್ ರಾಹುಲ್ ಗಾಂಧಿ ಅವರ ನಾಲಿಗೆ ಕತ್ತರಿಸಿದವರಿಗೆ ಹನ್ನೊಂದು ಲಕ್ಷ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದರು. ಈ ಹೇಳಿಕೆ ಬೆನ್ನಲ್ಲೇ ಗಾಯಕ್ವಾಡ್ ವಿರುದ್ಧ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ ಅಲ್ಲದೆ ಹೇಳಿಕೆ ವಿರುದ್ಧ ಪ್ರತಿಭಟನೆಯನ್ನೂ ನಡೆಸಿದ್ದಾರೆ ಇದರ ಬೆನ್ನಲೇ ಇದೀಗ ಗಾಯಕ್ವಾಡ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: China: ಗರ್ಭಿಣಿ ಮೇಲೆ ನೆಗೆದು ಹಾರಿದ ಶ್ವಾನ-ಗರ್ಭಪಾತ: ಮಾಲೀಕನಿಗೆ 10 ಲಕ್ಷ ರೂ. ದಂಡ

Advertisement

Udayavani is now on Telegram. Click here to join our channel and stay updated with the latest news.

Next