Advertisement

ಶಿಂಜೋ ಅಬೆ ಆರೋಗ್ಯ ಪರಿಸ್ಥಿತಿ ಚಿಂತಾಜನಕವಾಗಿದೆ: ಜಪಾನ್ ಪ್ರಧಾನಿ ಫುಮಿಯೊ ಕಿಶಿಡಾ

12:04 PM Jul 08, 2022 | Team Udayavani |

ಟೋಕಿಯೋ: ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಉಳಿಸಲು ವೈದ್ಯರು ಶ್ರಮಿಸುತ್ತಿದ್ದಾರೆ ಎಂದು ಜಪಾನ್ ಪ್ರಧಾನಿ ಫುಮಿಯೊ ಕಿಶಿಡಾ ಹೇಳಿದ್ದಾರೆ.

Advertisement

ಜಪಾನ್ ಕಾಲಮಾನ ಪ್ರಕಾರ ಬೆಳಗ್ಗೆ 11.30ರ ಸುಮಾರಿಗೆ ಪಶ್ಚಿಮ ಜಪಾನ್‌ ನ ನಾರಾ ನಗರದಲ್ಲಿ ಭಾಷಣ ಮಾಡುತ್ತಿದ್ದ ಮಾಜಿ ಪ್ರಧಾನಿ ಶಿಂಜೋ ಅಬೆ ಅವರಿಗೆ ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದ. ಗಾಯಗೊಂಡ ಶಿಂಜೋ ಅಬೆ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ.

“ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಸ್ಥಿತಿ ಚಿಂತಾಜನಕವಾಗಿದೆ. ವೈದ್ಯರು ಈ ಕ್ಷಣದಲ್ಲಿ ಅವರು ಮಾಡಬಹುದಾದ ಎಲ್ಲವನ್ನೂ ಮಾಡುತ್ತಿದ್ದಾರೆ. ಅವರು ಇದರಿಂದ ಬದುಕುಳಿಯುತ್ತಾರೆ ಎಂದು ನಾನು ಭಾವಿಸುತ್ತೇನೆ, ಅದಕ್ಕಾಗಿ ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ಕಿಶಿಡಾ ತಮ್ಮ ನಿವಾಸದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಹೇಳಿದರು.

ಇದನ್ನೂ ಓದಿ:ಬೊಮ್ಮಾಯಿ ಸರಕಾರ ಎಂದೇ ಹೇಳಬೇಕು..; ನಳಿನ್ ಕಟೀಲ್ ಪಾಠ ಮಾಡಿದ್ದೇಕೆ?

67ರ ಹರೆಯದ ಅಬೆ ಬೆಳಗ್ಗೆ 11:30ರ ಸುಮಾರಿಗೆ ನಾರಾದ ಬೀದಿಯಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡುತ್ತಿದ್ದಾಗ ಹಿಂದಿನಿಂದ ಅಪರಿಚಿತ ವ್ಯಕ್ತಿಯೊಬ್ಬ ಶಾಟ್‌ ಗನ್‌ನಿಂದ ದಾಳಿ ನಡೆಸಿದ್ದಾನೆ ಎಂದು ಜಪಾನ್ ಟೈಮ್ಸ್ ವರದಿ ಮಾಡಿದೆ. ಶಿಂಜೋ ಅಬೆ ಅವರ ಎದೆಗೆ ಗುಂಡು ತಗುಲಿದೆ.

Advertisement

ಪಿಎಂ ಮೋದಿ ಟ್ವೀಟ್: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಮೇಲಿನ ದಾಳಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ನನ್ನ ಆತ್ಮೀಯ ಸ್ನೇಹಿತ ಅಬೆ ಶಿಂಜೋ ಮೇಲಿನ ದಾಳಿಯಿಂದ ತೀವ್ರವಾಗಿ ನೊಂದಿದ್ದೇನೆ. ನಮ್ಮ ಪ್ರಾರ್ಥನೆಗಳು ಅವರೊಂದಿಗೆ, ಅವರ ಕುಟುಂಬ ಮತ್ತು ಜಪಾನ್ ಜನರೊಂದಿಗೆ ಇವೆ” ಎಂದಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next