Advertisement

ವಾಹನಕ್ಕೆ ಹಗ್ಗ ಕಟ್ಟಿ ಮೃತ ಗೋವುಗಳ ಸಾಗಾಟ: ಆಕ್ರೋಶ

09:39 AM Dec 06, 2021 | Team Udayavani |

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮೃತಪಟ್ಟಿದ್ದ ಎರಡು ಗೋವುಗಳನ್ನು ಐಆರ್‌ಬಿ ಕಂಪೆನಿಯ ಟೋಯಿಂಗ್‌ ವಾಹನಕ್ಕೆ ಹಗ್ಗಕಟ್ಟಿ ರಸ್ತೆಯಲ್ಲಿ ಎಳೆದುಕೊಂಡು ಹೋದ ಘಟನೆ ನಡೆದಿದ್ದು, ಇದಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ಷೇಪ ಹಾಗೂ ಆಕ್ರೋಶ ವ್ಯಕ್ತವಾಗಿದೆ.

Advertisement

ಹಿಂದೂ ಪರ ಸಂಘಟನೆಗಳು ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದೆ. ಭಟ್ಕಳದ ಬೆಳಕೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತದಿಂದ ಮೃತಪಟ್ಟ ಎರಡು ಜಾನುವಾರುಗಳನ್ನು ಐಆರ್‌ಬಿ ಟೋಯಿಂಗ್‌ (1033) ವಾಹನಕ್ಕೆ ಕಟ್ಟಿ ಎಳೆದೊಯ್ಯುತ್ತಿದ್ದುದನ್ನು ಆ ವಾಹನದ ಹಿಂಬದಿಯಿಂದ ಸಂಚರಿಸುತ್ತಿದ್ದ ಪ್ರಯಾಣಿಕರು ಯಾರೋ ತಮ್ಮ ಮೊಬೈಲ್‌ ನಲ್ಲಿ ಚಿತ್ರೀಕರಿಸಿದ್ದಾರೆ. ಬಳಿಕ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದಾರೆ.

ವಿಡಿಯೋದಲ್ಲಿ ಟೋಯಿಂಗ್‌ ವಾಹನದಲ್ಲಿ ಹಗ್ಗಕಟ್ಟಿ ರಸ್ತೆಯಲ್ಲಿ ಮೃತ ಗೋವುಗಳನ್ನು ಎಳೆದುಕೊಂಡು ಹೋಗುತ್ತಿರುವುದು ಸ್ಪಷ್ಟವಾಗಿ ಕಂಡು ಬಂದಿದ್ದು ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ.

ಇದನ್ನೂ ಓದಿ:ವಂಚನೆ ಪ್ರಕರಣ: ಜಾಕ್ವೆಲಿನ್ ಫರ್ನಾಂಡಿಸ್ ಗೆ ದೇಶ ತೊರೆಯದಂತೆ ತಡೆದ ಅಧಿಕಾರಿಗಳು!

ಕಂಪೆನಿಯ ವಿರುದ್ಧ ಸೋಮವಾರ ಶಿರೂರು ಟೋಲ್‌ ಗೇಟ್‌ ಬಳಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ಕೂಡ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ. ಈ ಘಟನೆಯ ಕುರಿತು ಭಟ್ಕಳದಲ್ಲೂ ಸಹ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ಹಿಂದೂ ಜಾಗರಣ ವೇದಿಕೆಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಘಟನೆಯನ್ನು ಖಂಡಿಸಿದ್ದಾರೆ.

Advertisement

ಅಪಘಾತದಿಂದ ಮೃತಪಟ್ಟಿದ್ದ ಗೋವುಗಳನ್ನು ಹೀಗೆ ಅಮಾನವೀಯವಾಗಿ ರಸ್ತೆಯಲ್ಲಿ ಎಳೆದುಕೊಂಡು ಹೋಗಿದ್ದು ಖಂಡನೀಯ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಭೇಕು ಎಂದು ಅವರು ಆಗ್ರಹಿಸಿದ್ದಾರಲ್ಲದೇ ಸೋಮವಾರ ಹಿಂದೂ ಜಾಗರಣಾ ವೇದಿಕೆಯ ವತಿಯಿಂದ ಸಹಾಯಕ ಆಯಕ್ತರನ್ನು ಭೇಟಿ ಮಾಡಿ ಸೂಕ್ತ ಕ್ರಮಕ್ಕೆ ಆಗ್ರಹಿಸುತ್ತೇವೆ ಎಂದೂ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next