Advertisement

Landslide: ಶಿರಾಡಿ ಘಾಟಿಯಲ್ಲಿ ಭೂಕುಸಿತ… ಸಂಚಾರ ಬಂದ್, ಕೆಸರಿನಲ್ಲಿ ಹೂತುಹೋದ ವಾಹನಗಳು

02:06 PM Jul 30, 2024 | Team Udayavani |

ಸಕಲೇಶಪುರ: ಭಾರಿ ಮಳೆ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೂಕುಸಿತವಾದ ಹಿನ್ನೆಲೆಯಲ್ಲಿ ರಸ್ತೆ ಬಂದ್ ಮಾಡಲಾಗಿದೆ.

Advertisement

ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75 ದೊಡ್ಡತಪ್ಪಲು ಸಮೀಪ ಭೂಕುಸಿತ ಉಂಟಾಗಿ ಎರಡು ಕಾರು, ಒಂದು ಟಿಪ್ಪರ್ ಹಾಗೂ ಒಂದು ಟ್ಯಾಂಕರ್ ಕೆಸರಿನಲ್ಲಿ ಸಿಲುಕಿದ್ದು ಅದೃಷ್ಟವಷಾತ್ ಯಾವುದೆ ಜೀವಹಾನಿ ಸಂಭವಿಸಿಲ್ಲ.

ಭಾರಿ ಭೂಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75ನ್ನು ಬಂದ್ ಮಾಡಲಾಗಿದ್ದು ಇದರಿಂದಾಗಿ ವಾಹನಗಳು ಹಲವು ಕಿ.ಮೀ ದೂರ ನಿಂತಲ್ಲೆ ನಿಲ್ಲುವಂತಾಗಿದೆ. ಊಟ ತಿಂಡಿ ಇಲ್ಲದೆ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಉಂಟಾಗಿದೆ.

ಇದನ್ನೂ ಓದಿ: Mangaluru: ಟ್ಯಾಂಕರ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಸ್ಥಳದಲ್ಲೇ ಮೃತ್ಯು

Advertisement
Advertisement

Udayavani is now on Telegram. Click here to join our channel and stay updated with the latest news.

Next