Advertisement

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

12:37 AM Nov 26, 2024 | Team Udayavani |

ಉಪ್ಪಿನಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಪೇಟೆಯಲ್ಲಿ ಸೋಮವಾರ ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿಯಾಗಿ ಪಾದಚಾರಿಯೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

Advertisement

ಶಿರಾಡಿ ಗ್ರಾಮದ ಪದಂಬಳ ನಿವಾಸಿ ಕೃಷಿಕ ಕೆ.ಎಂ. ಮತ್ತಾಯಿ ಯಾನೆ ಮತ್ತಚ್ಚನ್‌ (70) ಮೃತರು. ಇವರು ಮನೆಯಿಂದ ಶಿರಾಡಿ ಪೇಟೆಗೆ ಪಡಿತರ ಪಡೆಯಲು ಬಂದವರು ಶಿರಾಡಿಯಲ್ಲಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಧರ್ಮಸ್ಥಳದಿಂದ-ಬೆಂಗಳೂರು ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿಯಾಗಿದೆ. ಗಂಭೀರ ಗಾಯಗೊಂಡಿರುವ ಮತ್ತಾಯಿ ಅವರನ್ನು 108 ಆ್ಯಂಬುಲೆನ್ಸ್‌ನಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತಾದರೂ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಂಜೆ ವೇಳೆಗೆ ಅವರು ಮೃತಪಟ್ಟಿದ್ದಾರೆ. ಕೆ.ಎಂ. ಮತ್ತಾಯಿ ಅವರು ಕೃಷಿ, ಹೈನುಗಾರಿಕೆ ಮಾಡಿ ಜೀವನ ನಡೆಸುತ್ತಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಕುಟುಂಬಕ್ಕೆ 2ನೇ ಅಘಾತ: ಮೃತಮತ್ತಾಯಿ ಅವರ ಹಿರಿಯ ಪುತ್ರ ರೆಜಿ ಅವರು 2 ತಿಂಗಳ ಹಿಂದೆ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಉದನೆ ಸಮೀಪದ ನೇಲಡ್ಕದಲ್ಲಿ ಕಾರು ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದು, ನಡೆದಾಡಲು ಸಾಧ್ಯವಾಗದೆ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಇದೀಗ ಮತ್ತಾಯಿ ಅವರು ಬಸ್‌ ಅಪಘಾತದಲ್ಲಿ ಮೃತಪಟ್ಟಿದ್ದು ಇವರ ಕುಟುಂಬಕ್ಕೆ ಮತ್ತೆ ಅಘಾತವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next