Advertisement

Shiradi: ಅಕ್ಕಿ ಸಾಗಾಟದ ಲಾರಿ ಬೆಂಕಿಗಾಹುತಿ

10:25 PM Oct 21, 2023 | Team Udayavani |

ಉಪ್ಪಿನಂಗಡಿ: ಹಾಸನ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಅಕ್ಕಿ ಸಾಗಾಟದ ಲಾರಿಯೊಂದು ಶಿರಾಡಿ ಘಾಟಿಯಲ್ಲಿ ಬೆಂಕಿಗಾಹುತಿ ಆಗಿರುವ ಘಟನೆ ಅ. 20ರಂದು ರಾತ್ರಿ ನಡೆದಿದೆ.

Advertisement

ಶಿರಾಡಿ ಘಾಟಿಯ ಡಬಲ್‌ ಟರ್ನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಪಾಯದ ಮುನ್ಸೂಚನೆ ಸಿಗುತ್ತಿದ್ದಂತೆ ಲಾರಿ ಚಾಲಕ ಹಾಗೂ ಕ್ಲೀನರ್‌ ಲಾರಿಯನ್ನು ನಿಲ್ಲಿಸಿ ಕೆಳಗಿಳಿದು, ಅಪಾಯದಿಂದ ಪಾರಾಗಿದ್ದಾರೆ.

ಲಾರಿ ಹಾಗೂ ಅದರಲ್ಲಿದ್ದ ಅಕ್ಕಿ ಸಂಪೂರ್ಣ ಸುಟ್ಟು ಹೋಗಿದೆ. ಹಾಸನದಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬಂದಿ ಬೆಂಕಿ ನಂದಿಸಿದ್ದಾರೆ.

ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೂ ಕೆಲ ಹೊತ್ತು ಅಡಚಣೆ ಉಂಟಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next