ಹಾಸನ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ -75ರ ಮಾರನಹಳ್ಳಿಯಿಂದ ದೊಣಿಗಲ್ ವರೆಗಿನ ಹಾಸನ ಜಿಲ್ಲಾ ವ್ಯಾಪ್ತಿಯ ಶಿರಾಡಿ ಘಾಟಿ ರಸ್ತೆಯಲ್ಲಿ ಮಂಗಳವಾರದಿಂದ ಎಲ್ಲ ಬಗೆಯ ವಾಹನಗಳ ಸಂಚಾರಕ್ಕೆ ಜಿಲ್ಲಾಧಿಕಾರಿ ಆರ್. ಗಿರೀಶ್ ಅನುಮತಿ ನೀಡಿ ಆದೇಶ ಹೊರಡಿಸಿದ್ದಾರೆ.
ದೋಣಿಗಲ್ ಬಳಿ ರಸ್ತೆ ಕುಸಿದಿದ್ದರಿಂದ ಭಾರೀ ವಾಹನಗಳ ಸಂಚಾರ ನಿರ್ಬಂಧಿಸಲಾಗಿತ್ತು.
ಈಗ ರಸ್ತೆ ದುರಸ್ತಿಯಾಗಿದ್ದು, ವಾಹನ ಸಂಚಾರಕ್ಕೆ ಅನುಮತಿ ನೀಡಬಹುದೆಂದು ಎನ್‌ಎಚ್‌ಎಐ ಎಂಜಿನಿಯರುಗಳು ಶಿಫಾರಸು ಮಾಡಿದ್ದರು.
ತುರ್ತು ಸಂದರ್ಭಗಳಲ್ಲಿ ಸ್ಪಂದಿಸುವ ನಿಟ್ಟಿನಲ್ಲಿ ಈ ರಸ್ತೆಯಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಸಿಬಂದಿಯನ್ನು ನಿಯೋಜಿಸಲು ಪೊಲೀಸ್ ಅಧೀಕ್ಷಕರಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ:ಅಭಿಪ್ರಾಯ ಸಂಗ್ರಹಿಸಿ ರಾಜ್ಯ ಸರ್ಕಾರಕ್ಕೆ ಶಿಫಾರಸು: ಕೆ.ಜಯಪ್ರಕಾಶ್ ಹೆಗ್ಡೆ