ಶಿರಹಟ್ಟಿ : ಮಕರ ಸಂಕ್ರಾಂತಿಯ ನಿಮಿತ್ತ ಶಿರಹಟ್ಟಿ ತಾಲ್ಲೂಕಿನ ಹೊಳೆ ಇಟಗಿ ಗ್ರಾಮದ ಪಕ್ಕದಲ್ಲಿರುವ ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ಹೋದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಶನಿವಾರ ಮಧ್ಯಾಹ್ನ 2 ಘಂಟೆಯ ಸುಮಾರಿಗೆ ಹೊಳೆ ಇಟಗಿ ಗ್ರಾಮಕ್ಕೆ ಹೊಂದಿಕೊಂಡಿರುವ ತುಂಗಭದ್ರಾ ನದಿಯಲ್ಲಿ ಸಂಕ್ರಮಣ ನಿಮಿತ್ತ ಸ್ನಾನಕ್ಕಾಗಿ ಹೋಗಿದ್ದು ನದಿ ಆಳವಾಗಿದ್ದ ಪರಿಣಾಮ ಮುಳಗಿ ವರ್ಷದ ಸೂರಣಗಿ ಗ್ರಾಮದ ಪ್ರಜ್ವಲ್ ಬಸವರಾಜ ಮಾಸ್ತಮ್ಮನವರ (14 ವರ್ಷ) ಹಾಗೂ ಹೊಳೆ ಇಟಗಿ ಗ್ರಾಮದ ನಾಗರಾಜ ಕರಬಸಪ್ಪ ಬುರಡಿ (13 ವರ್ಷ) ಮೃತಪಟ್ಟ ಬಾಲಕರು.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ನದಿ ಪಾತ್ರಕ್ಕೆ ತೆರಳಿ ಈಜುಗಾರರ ಸಹಾಯದಿಂದ ಮೃತ ದೇಹಗಳನ್ನು ಹೊರ ತೆಗೆಯಲಾಗಿದೆ.
ಮುಗಿಲು ಮುಟ್ಟಿದ ಪಾಲಕರ ಆಕ್ರಂದನ
ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬಂದ ಮೃತ ಬಾಲಕರ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.
Related Articles
ಸೂಕ್ತ ಪರಿಹಾರ ನೀಡಲಿ :
ಈ ವೇಳೆ ಸ್ಥಳೀಯ ಮುಖಂಡ ಮಂಜುನಾಥ್ ಶಂಕಿನದಾಸರ ಘಟನೆ ಕುರಿತು ಮಾತನಾಡಿ, ಕೂಲಿ ಮಾಡಿ ಜೀವನ ನಡೆಸುತ್ತಿರವಂತಹ ಕುಟುಂಬಗಳ ಬಾಲಕರು ನದಿಯಲ್ಲಿ ಬಿದ್ದು ಸಾವನ್ನಪ್ಪಿದ್ದು ಆದ್ದರಿಂದ ಮೇಲಧಿಕಾರಿಗಳು ಬಡ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.
ಘಟನಾ ಸ್ಥಳಕ್ಕೆ ತಹಸೀಲ್ದಾರ್ ಜೆ. ಬಿ. ಮಜ್ಜಗಿ, ಸಿಪಿಐ ವಿಕಾಸ್ ಲಮಾಣಿ, ಪಿಎಸ್ಐ ನವೀನ್ ಕುಮಾರ್ ಜಕ್ಕಲಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.