Advertisement
ಕೆಲ ವರ್ಷಗಳ ಹಿಂದೆ ನಿರ್ಮಾಣವಾದ ಮೋರಿ ಕುಸಿದು ಎರಡು ವರ್ಷ ಕಳೆದರೂ ಪರ್ಯಾಯ ವ್ಯವಸ್ಥೆಯಾಗಿಲ್ಲ.
ಹೊಳೆಗೆ ಅಡ್ಡಲಾಗಿ ನಿರ್ಮಿಸಿರುವ ಮೋರಿ ನೆರೆ ಸಂದರ್ಭ ಮುಳುಗುವುದರಿಂದ ಸ್ಥಳಿಯರಿಗೆ ಸಂಚರಿಸಲು ಅನನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಈ ಭಾಗದಲ್ಲಿ ಕಿರು ಸೇತುವೆ ನಿರ್ಮಾಣ ಮಾಡಬೇಕು ಎಂಬುದು ಸ್ಥಳೀಯರ ಬಹುದಿನಗಳ ಬೇಡಿಕೆಯಾಗಿದೆ. ಅಲ್ಲದೆ ಮೋರಿ ನಿರ್ಮಾಣದಿಂದ ಮಳೆ ನೀರು ಸರಾಗವಾಗಿ ಹರಿಯದೆ ಈ ಪರಿಸರದ ಕೃಷಿಕರಿಗೂ ಸಂಕಷ್ಟ ಉಂಟಾಗುತ್ತಿದೆ. ಈಗ ಕುಸಿದ ಮೋರಿ ದುರಸ್ತಿ ಪಡಿಸುವುದರಿಂದ ಸ್ಥಳೀಯರಿಗೆ ಯಾವುದೇ ಪ್ರಯೋಜನ ವಿಲ್ಲ. ಇದರ ಬದಲಾಗಿ ಹೊಸದಾಗಿ ಕಿರು ಸೇತುವೆ ನಿರ್ಮಾಣ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಶಾಸಕರೊಂದಿಗೆ ಚರ್ಚಿಸಿ ಕ್ರಮ
ಸ್ಥಳೀಯರು ಹಲವು ವರ್ಷಗಳಿಂದ ಈ ಭಾಗದಲ್ಲಿ ಕಿರು ಸೇತುವೆ ನಿರ್ಮಾಣ ಮಾಡಬೇಕು ಎಂದು ಮನವಿ ಮಾಡುತ್ತಿದ್ದಾರೆ. ಸ್ಥಳೀಯರ ಬೇಡಿಕೆಯಂತೆ ಮೋರಿ ದುರಸ್ತಿ ಮಾಡುವ ಬದಲಿಗೆ ಕಿರು ಸೇತುವೆ ನಿರ್ಮಾಣ ಮಾಡುವ ಬಗ್ಗೆ ಶಾಸಕ ಸುನಿಲ್ ಕುಮಾರ್ ಅವರಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
– ರಮಾನಂದ ಪೂಜಾರಿ, ಅಧ್ಯಕ್ಷರು, ಶಿರ್ಲಾಲು ಗ್ರಾಮ ಪಂಚಾಯತ್