Advertisement

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

09:48 AM Dec 26, 2024 | Team Udayavani |

ಶಿರ್ವ: ಇಲ್ಲಿನ ಹಿಂದೂ ಜೂನಿಯರ್‌ ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ದಶಮಾನೋತ್ಸವ, ಹಳೆವಿದ್ಯಾರ್ಥಿಗಳ ಸಮ್ಮಿಲನ ಹಾಗೂ ನೂತನ ಉಪಹಾರ ಗೃಹದ ಸಮರ್ಪಣೆಯು ಡಿ.29 ರಂದು ಶಿರ್ವ ಹಿಂದೂ ಪ.ಪೂ.ಕಾಲೇಜಿನ  ಆವರಣದಲ್ಲಿ ನಡೆಯಲಿದೆ.

Advertisement

ನಿಟ್ಟೆ ಪರಿಗಣಿತ ವಿ.ವಿ.ಯ ಕುಲಪತಿ  ಎನ್‌.ವಿನಯ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಬೆಂಗಳೂರು ಎಂಆರ್‌ಜಿ ಗ್ರೂಪ್‌ನ ಸಂಸ್ಥಾಪಕ ಅಧ್ಯಕ್ಷ ಡಾ| ಕೆ. ಪ್ರಕಾಶ್‌ ಶೆಟ್ಟಿ ಹಾಗೂ ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಭಾಗವಹಿಸಲಿರುವರು. ಕಾಪು ಶಾಸಕ ಸುರೇಶ್‌ ಶೆಟ್ಟಿ ಗುರ್ಮೆ ದಶಮಾನೋತ್ಸವ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದು, ವಿಧಾನಪರಿಷತ್‌ ಸದಸ್ಯ ಐವನ್‌ ಡಿಸೋಜಾ ವೆಬ್‌ಸೈಟ್‌ ಅನಾವರಣಗೊಳಿಸಲಿರುವರು.

ಗೌರವ ಅತಿಥಿಗಳಾಗಿ  ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್‌ ಭೋಜ ಶೆಟ್ಟಿ ಮತ್ತು ವಡೋದರಾ ಶಶಿ ಕೆಟರಿಂಗ್‌ ಸರ್ವಿಸಸ್‌ನ ಆಡಳಿತ ನಿರ್ದೇಶಕ ಶಶಿಧರ ಶೆಟ್ಟಿ ಹಾಗೂ ಅತಿಥಿಗಳಾಗಿ ವಿ.ಕೆ. ಗ್ರೂಪ್‌ ಆಫ್‌ ಕಂಪೆನೀಸ್‌ನ ಸಿಎಂಡಿ ಕೆ.ಎಂ. ಶೆಟ್ಟಿ, ಯು.ಎ.ಇ. ಬಂಟರ ಸಂಘದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಅಂಕಲೇಶ್ವರ ಮಾತಾಶ್ರೀ ಹಾಸ್ಪಿಟಾಲಿಟಿಯ ಸಿಎಂಡಿ ಅಜಿತ್‌ ಎಸ್‌. ಶೆಟ್ಟಿ , ಶಿರ್ವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿ. ಸುಬ್ಬಯ್ಯ ಹೆಗ್ಡೆ ಭಾಗವಹಿಸಲಿರುವರು.

ಹಿರಿಯ ಹಳೆ ವಿದ್ಯಾರ್ಥಿಗಳಾದ ಅಟ್ಟಿಂಜೆ ಶಂಭು ಶೆಟ್ಟಿ ಮತ್ತು ಎಸ್‌.ಕೆ. ಸಾಲ್ಯಾನ್‌, ಬೆಳ್ಮಣ್‌ಅವರನ್ನು  ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಪ್ರೊ|ವೈ. ಭಾಸ್ಕರ ಶೆಟ್ಟಿ ಹಾಗೂ ಸಾಧಕ ಹಳೆವಿದ್ಯಾರ್ಥಿಗಳಾದ ಸಿಎ ಕೃಷ್ಣ ನಾಯಕ್‌, ಕೋಡು ದಿವಾಕರ ಶೆಟ್ಟಿ ಮತ್ತು ಎನ್‌. ಸಂಗೀತಾ ಎಸ್‌. ಶೆಟ್ಟಿ, ಅವರನ್ನು ನಿವೃತ್ತ ಪ್ರಾಂಶುಪಾಲ ರಾಜಗೋಪಾಲ್‌ ಕೆ. ಗೌರವಿಸಲಿರುವರು. ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ರಮಾನಂದ ಶೆಟ್ಟಿಗಾರ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ದಶಮಾನೋತ್ಸವ ಸಂಘಟನಾ ಸಮಿತಿ ಅಧ್ಯಕ್ಷ ಖಾಂದೇಶ್‌ ಭಾಸ್ಕರ ಶೆಟ್ಟಿ  ಹಳೆವಿದ್ಯಾರ್ಥಿ ಸಂಘದ ನಿಕಟ ಪೂರ್ವ ಅಧ್ಯಕ್ಷ ಕುತ್ಯಾರು ಪ್ರಸಾದ್‌ ಶೆಟ್ಟಿ, ಮುಂಬಯಿ ಘಟಕದ ಅಧ್ಯಕ್ಷ ಉದಯ ಕುಮಾರ್‌ ಶೆಟ್ಟಿ  ಬೆಂಗಳೂರು ಘಟಕದ ಅಧ್ಯಕ್ಷ ರಾಜೇಶ್‌ ಶೆಟ್ಟಿ , ದಶಮಾನೋತ್ಸವ ಸಂಘಟನಾ ಸಮಿತಿ  ಸಂಚಾಲಕರಾದ ಕುತ್ಯಾರು ಕಿಶೋರ್‌ ಕುಮಾರ್‌ ಶೆಟ್ಟಿ  ಮತ್ತು ಸಚ್ಚಿದಾನಂದ ಹೆಗ್ಡೆ, ಕಾರ್ಯದರ್ಶಿ ಕುತ್ಯಾರು ನವೀನ್‌ ಶೆಟ್ಟಿ ಜತೆ ಕಾರ್ಯದರ್ಶಿ ಪ್ರಶಾಂತ್‌ ಬಿ. ಶೆಟ್ಟಿ, ಕೋಶಾಧಿಕಾರಿ ಸದಾನಂದ .ಎಸ್‌, ಸಹ ಕೋಶಾಧಿಕಾರಿ ಮನೋಹರ ಶೆಟ್ಟಿ ಮತ್ತು  ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಭಾಸ್ಕರ್‌ ಎ.ಮತ್ತು  ಮುಖ್ಯ ಶಿಕ್ಷಕಿ  ವಸಂತಿ ಉಪಸ್ಥಿತರಿರುವರು ಎಂದು ಸಮಿತಿಯ ಪ್ರಕಟನೆ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next