ಶಿರ್ವ: ಇಲ್ಲಿನ ಆರೋಗ್ಯ ಮಾತಾ (ಸಾವುದ್ ಅಮ್ಮನವರ)ದೇವಾಲಯದ ವಾರ್ಷಿಕ ಮಹೋತ್ಸವವು ದೇವರ ವಾಕ್ಯದ ಸಂಭ್ರಮದೊಂದಿಗೆ ಮಂಗಳವಾರ ಆರಂಭಗೊಂಡಿತು.
ಶಂಕರಪುರ ಸಂತ ಎವೆಂಜಲಿಸ್ಟ್ ಚರ್ಚಿನ ಸಹಾಯಕ ಧರ್ಮಗುರು ವಂ| ವಿಜಯ್ ಡಿಸೋಜಾ ಚರಲ್ ಆಶೀರ್ವಾದದೊಂದಿಗೆ ವಾರ್ಷಿಕ ಮಹೋತ್ಸವಕ್ಕೆ ಚಾಲನೆ ನೀಡಿದರು.ಬಳಿಕ ಮಾತೆ ಮೇರಿಯ ಮೂರ್ತಿಯನ್ನು ಮೆರವಣಿಗೆಯಲ್ಲಿ ಚರ್ಚಿಗೆ ತರಲಾಯಿತು.
ಫೆ.1ರಂದು ಬೆಳಿಗ್ಗೆ 10-15ರಿಂದ ತೊಟ್ಟಂ ಚರ್ಚ್‌ನ ಪ್ರಧಾನ ಧರ್ಮಗುರು ವಂ| ಡೆನ್ನಿಸ್ ಡೇಸಾ ಅವರ ನೇತೃತ್ವದಲ್ಲಿ ಪವಿತ್ರ ಬಲಿಪೂಜೆ ನಡೆದು ವಾರ್ಷಿಕ ಮಹೋತ್ಸವ ಸಂಪನ್ನಗೊಳ್ಳಲಿದೆ.
ವಾರ್ಷಿಕ ಹಬ್ಬದ ಸಂದರ್ಭದಲ್ಲಿ ಸರ್ವ ಧರ್ಮದ ಭಕ್ತಾಧಿಗಳಿಗೆ ಆರೋಗ್ಯ ಮಾತೆಯ ಆಶೀರ್ವಾದ ಪಡೆಯಲು ಹರಕೆ ಸಲ್ಲಿಸಲು ಹಾಗೂ ಮೊಂಬತ್ತಿ ಉರಿಸಲು ಅವಕಾಶ ಕಲ್ಪಿಸಲಾಗಿದೆ. ರಾತ್ರಿ ಸರ್ವ ಧರ್ಮದ ಭಕ್ತರು ಆಗಮಿಸಿ ಆರೋಗ್ಯ ಮಾತೆಯ ದರ್ಶನ ಪಡೆದು ತಮ್ಮ ಸಂಕಷ್ಟ ನಿವಾರಣೆಗಾಗಿ ಮೊಂಬತ್ತಿ ಉರಿಸಿ ಹರಕೆ ಸಲ್ಲಿಸಿ ತೀರ್ಥ,ಎಣ್ಣೆ ಪ್ರಸಾದ ಪಡೆದರು.
ಮಂಗಳೂರು ಫಾ| ಮುಲ್ಲರ್ ಚಾರಿಟೇಬಲ್ ಸಂಸ್ಥೆಯ ನಿರ್ದೇಶಕ ವಂ|ರಿಚರ್ಡ್ ಕುವೆಲ್ಲೋ, ಉಡುಪಿ ವಲಯದ ಪ್ರಧಾನ ಧರ್ಮಗುರು ವಂ| ಚಾರ್ಲ್ಸ್ ಕ್ವಾಡ್ರಸ್,ಕಾರ್ಕಳ ವಲಯದ ಪ್ರಧಾನ ಧರ್ಮಗುರು ವಂ| ಪೌಲ್ ರೇಗೋ,ಐಸಿವೈಎಂ ರಾಷ್ಟ್ರೀಯ ನಿರ್ದೇಶಕ ವಂ|ಚೇತನ್ ಮಚಾದೋ,ಉಡುಪಿ ಕೆಥೋಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ವಂ|ವಿನ್ಸೆಂಟ್ ಕ್ರಾಸ್ತಾ, ಶಿರ್ವಚರ್ಚಿನ ಪ್ರಧಾನ ಧರ್ಮಗುರು ವಂ|ಡಾ| ಲೆಸ್ಲಿ ಡಿಸೋಜಾ, ಸಹಾಯಕ ಧರ್ಮಗುರುಗಳಾದ ವಂ| ರೋಲ್ವಿನ್ ಅರಾನ್ಹಾ ಮತ್ತು ವಂ|ಸ್ಟೀವನ್ ನೆಲ್ಸನ್ ಪೆರಿಸ್, ಚರ್ಚ್ ಪಾಲನ ಮಂಡಳಿಯ ಉಪಾಧ್ಯಕ್ಷ ಮೆಲ್ವಿನ್ ಅರಾನ್ಹ, ಕಾರ್ಯದರ್ಶಿ ಫ್ಲಾವಿಯಾ ಡಿಸೋಜಾ, ಚರ್ಚ್ ಆಯೋಗದ ಸಂಯೋಜಕಿ ಲೀನಾ ಮಚಾದೋ,ಚರ್ಚ್ ಆರ್ಥಿಕ ಮತ್ತು ಪಾಲನ ಮಂಡಳಿಯ ಸದಸ್ಯರು,ಉಡುಪಿ ಮತ್ತು ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಗುರುಗಳು ಹಾಗೂ ಶಿರ್ವ ವಲಯದ ವಿವಿಧ ಚರ್ಚುಗಳ ಧರ್ಮಗುರುಗಳು,ಧರ್ಮಭಗಿನಿಯರು,ಭಕ್ತರು ಉಪಸ್ಥಿತರಿದ್ದರು.