ಶಿರ್ವ: ವಿಪರೀತ ಕುಡಿತದ ಚಟ ಹೊಂದಿದ್ದ ಯುವಕ ಕುಡಿತದ ಮತ್ತಿನಲ್ಲಿ ಯಾವುದೋ ಕಾರಣಕ್ಕೆ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವ ತೊಟ್ಲಗುರಿ ಬಳಿ ರವಿವಾರ ಮಧ್ಯಾಹ್ನ ನಡೆದಿದೆ.
Advertisement
ತೊಟ್ಲಗುರಿ ನಿವಾಸಿ ರಾಜು(45) ತನ್ನ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾಪುವಿನ ಸಮಾಜ ಸೇವಕ ಸೂರಿ ಶೆಟ್ಟಿ ಹಾಗೂ ದೆಂದೂರಿನ ಅಶೋಕ್ ಶೆಟ್ಟಿ ಮೃತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಿದ್ದು ಉಡುಪಿಯ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಮಂಗಳೂರು: ಪರೀಕ್ಷೆಯಲ್ಲಿ ನಿರೀಕ್ಷೆಗಿಂತ ಕಡಿಮೆ ಅಂಕ… ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ