Advertisement

ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಆರ್ ಪಾಟ್ಕರ್ ರಾಜಿನಾಮೆ

06:26 PM Aug 19, 2022 | Team Udayavani |

ಶಿರ್ವ: ಇಲ್ಲಿನ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಆರ್ ಪಾಟ್ಕರ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿರುವುದಾಗಿ ತಿಳಿಸಿದ್ದಾರೆ.

Advertisement

ವೈಯುಕ್ತಿಕ ಕಾರಣಗಳಿಂದ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು ಪಂಚಾಯತ್ ಸದಸ್ಯನಾಗಿ ಮುಂದುವರಿಯುವುದಾಗಿ ತಿಳಿಸಿರುವ ಅವರು ತನ್ನ ಅಧಿಕಾರಾವಧಿಯಲ್ಲಿ ಸಹಕರಿಸಿದ ಎಲ್ಲಾ ಗ್ರಾಮಸ್ಥರಿಗೆ, ದಾನಿಗಳಿಗೆ, ಹಿತೈಷಿಗಳಿಗೆ ಕೃತಜ್ಞತೆಯನ್ನು ತಿಳಿಸಿದ್ದಾರೆ.

ಸಹಾಯಕ ಕಮಿಷನರ್ ಉಪ ವಿಭಾಗ ಕುಂದಾಪುರ ಇವರಿಗೆ ರಾಜಿನಾಮೆ ಪತ್ರ ಸಲ್ಲಿಸಿದ್ದು, ಇದೀಗ ಅದು ಅಂಗೀಕಾರಗೊಂಡಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಗಜಪಡೆಗೆ ಭಾರ ಹೊರುವ ತಾಲೀಮು ; ಮೊದಲ ದಿನವೇ 550 ಕೆ.ಜಿ. ತೂಕ ಭಾರ

ಗ್ರಾಮದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಬಸ್‌ ನಿಲ್ದಾಣ, ಶುದ್ದ ಕುಡಿಯುವ ನೀರಿನ ವ್ಯವಸ್ಥೆ, ಪ್ರಪ್ರಥಮ ಬಾರಿಗೆ ಬಂಟೆಕಲ್ಲಿನಲ್ಲಿ ಹವಾನಿಯಂತ್ರಕ  ಅಂಗನವಾಡಿ ಮುಂತಾದ ಕೆಲಸಗಳನ್ನು ಮಾಡಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next