Advertisement

ಶಿರ್ವ ಗ್ರಾ.ಪಂ.ಅಧ್ಯಕ್ಷರ ಆಯ್ಕೆ : ಚುನಾವಣಾಧಿಕಾರಿ ನೇಮಕ

11:17 AM Sep 04, 2022 | Team Udayavani |

ಶಿರ್ವ : ಕಾಪು ತಾಲೂಕಿನ ಶಿರ್ವ ಗ್ರಾಮ ಪಂಚಾಯತ್‌ನ ಮುಂದಿನ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡುವ ಸಲುವಾಗಿ ಉಡುಪಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಗುರುಪ್ರಸಾದ್‌ ಅವರನ್ನು ಚುನಾವಣಾ ಅಧಿಕಾರಿಯನ್ನಾಗಿ ನೇಮಕ ಮಾಡಿ ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎಂ. ಕೂರ್ಮಾ ರಾವ್‌ ಆದೇಶ ನೀಡಿದ್ದಾರೆ.

Advertisement

ಶಿರ್ವ ಗ್ರಾ.ಪಂ. ಅಧ್ಯಕ್ಷ ಕೆ.ಆರ್‌.ಪಾಟ್ಕರ್‌ ಅವರು ಸ್ವ ಇಚ್ಛೆಯಿಂದ ರಾಜೀನಾಮೆ ಸಲ್ಲಿಸಿದ್ದು, ತೆರವಾದ ಸ್ಥಾನಕ್ಕೆ ಗ್ರಾ.ಪಂ. ಆಡಳಿತಾತ್ಮಕ ದೃಷ್ಟಿಯಿಂದ ಮುಂದಿನ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಡೆಯಲಿದೆ.

ಇದನ್ನೂ ಓದಿ : ಹುಣಸೂರು: ಹರೀನಹಳ್ಳಿಯಲ್ಲಿ ತುಂಬಿದ ಕೆರೆಯಲ್ಲಿ ಸಂಭ್ರಮದ ತೆಪ್ಪೋತ್ಸವ

Advertisement

Udayavani is now on Telegram. Click here to join our channel and stay updated with the latest news.

Next