Advertisement

Shirva:ಅ.20 ರಂದು ಜ|ಕೆ.ಎಸ್‌.ಹೆಗ್ಡೆ ಗ್ರಾಮೀಣ ಆರೋಗ್ಯ ಕೇಂದ್ರ ಉದ್ಘಾಟನೆ,`ವಿನಯಾಭಿವಂದನೆ’

07:28 PM Oct 17, 2023 | Team Udayavani |

ಶಿರ್ವ: ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದ ವತಿಯಿಂದ ಶಿರ್ವದ ವಿದ್ಯಾವರ್ಧಕ ಕ್ಯಾಂಪಸ್‌ ನಲ್ಲಿ ಸುಮಾರು 2 ಕೋ.ರೂ. ವೆಚ್ಚದಲ್ಲಿ ನಿರ್ಮಿಸಿ ನಿರ್ವಹಿಸಲ್ಪಡುವ ಜಸ್ಟಿಸ್‌ ಕೆ.ಎಸ್‌. ಹೆಗ್ಡೆ ಗ್ರಾಮೀಣ ಆರೋಗ್ಯ ಕೇಂದ್ರದ ಉದ್ಘಾಟನೆ ಅ.20 ರಂದು ಬೆಳಗ್ಗೆ 10.00 ಗಂಟೆಗೆ ಶಿರ್ವ ವಿದ್ಯಾವರ್ಧಕ ಕ್ಯಾಂಪಸ್‌ನಲ್ಲಿ ಜರಗಲಿದೆ. ಭಾರತದ ಸರ್ವೋತ್ಛ ನ್ಯಾಯಲಯದ ನಿವೃತ್ತ ನ್ಯಾಯಮೂರ್ತಿ ಎನ್‌. ಸಂತೋಷ್‌ ಹೆಗ್ಡೆ ಉದ್ಘಾಟಸಲಿದ್ದು ,ನಿಟ್ಟೆ ವಿಶ್ವವಿದ್ಯಾನಿಲಯದ ಕುಲಾಧಿಪತಿ ಎನ್‌. ವಿನಯ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.

Advertisement

ಕಾಪು ಶಾಸಕ, ಶಿರ್ವವಿದ್ಯಾವರ್ಧಕ ಸಂಘದ ಅಧ್ಯಕ್ಷ ಸುರೇಶ್‌ ಪಿ. ಶೆಟ್ಟಿ ಗುರ್ಮೆ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು , ನಿಟ್ಟೆ ವಿಶ್ವವಿದ್ಯಾನಿಲಯದ ಸಹಕುಲಾಧಿಪತಿಗಳಾದ ಡಾ|ಎಂ. ಶಾಂತಾರಾಮ್‌ ಶೆಟ್ಟಿ, ವಿಶಾಲ್‌ ಹೆಗ್ಡೆ , ಕುಲಪತಿ ಡಾ|ಎಂ.ಎಸ್‌. ಮೂಡಿತ್ತಾಯ, ಉಪಾಧ್ಯಕ್ಷ (ಸಿಆರ್‌ಎಲ್‌ವುತ್ತು ಐಎಸ್‌ಆರ್‌) ಡಾ|ಸತೀಶ್‌ ಕುಮಾರ್‌ ಭಂಡಾರಿ ಹಾಗೂ ಶಿರ್ವ ಗ್ರಾ. ಪಂ.ಅಧ್ಯಕ್ಷೆ ಸವಿತಾ ರಾಜೇಶ್‌ ಅತಿಥಿಗಳಾಗಿ ಭಾಗವಹಿಸ‌ಲಿದ್ದಾರೆ.

ಗಾಮೀಣ ಆರೋಗ್ಯ ಕೇಂದ್ರದಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸೇವೆಗಳು ಲಭಿಸಲಿದ್ದು, ಕೆಲವು ಸೇವೆಗಳು ಮತ್ತು ಔಷಧ ಉಚಿತವಾಗಿ ದೊರೆಯಲಿದೆ.

ವಿನಯಾಭಿವಂದನೆ:
ನಿಟ್ಟೆ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾಗಿ, ನಿಟ್ಟೆ ಎಜುಕೇಶನ್‌ ಟ್ರಸ್ಟ್‌ನ ಅಧ್ಯಕ್ಷರಾಗಿ,ಕೈಗಾರಿಕೋದ್ಯಮಿಯಾಗಿ,ಶಿರ್ವ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ,ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಕಳೆದ ಆರು ದಶಕಗಳಿಂದ ಸೇವೆ ಸಲ್ಲಿಸುತ್ತಿರುವ, ಕರಾವಳಿ ಜಿಲ್ಲೆಗಳಲ್ಲಿ ಶೈಕ್ಷಣಿಕ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಕ್ರಾಂತಿಯ ಮೂಲಕ ಸಾವಿರಾರು ಯುವಕರಿಗೆ ಶಿಕ್ಷಣ ಮತ್ತು ಉದ್ಯೋಗ ನೀಡಿದ ದೂರದೃಷ್ಟಿಯ ದೃಷ್ಟಾರ ಎನ್‌.ವಿನಯ ಹೆಗ್ಡೆ ಅವರಿಗೆ ಶಿರ್ವ ವಿದ್ಯಾವರ್ಧಕ ಸಂಘದ ವತಿಯಿಂದ ಸಮ್ಮಾನ-ವಿನಯಾಭಿವಂದನೆ ಜರಗಲಿದೆ.

Advertisement

ವಿದ್ಯಾವರ್ಧಕ ಸಂಘದ ಅಧ್ಯಕ್ಷ , ಶಾಸಕ ಸುರೇಶ್‌ .ಪಿ ಶೆಟ್ಟಿ ಗುರ್ಮೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು ,ಅಭಿನಂದನಾ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಭಾರತದ ಸರ್ವೋತ್ಛ ನ್ಯಾಯಲಯದ ನಿವೃತ್ತ ನ್ಯಾಯಮೂರ್ತಿ ಎನ್‌. ಸಂತೋಷ್‌ ಹೆಗ್ಡೆ, ಡಾ|ಎಂ. ಶಾಂತರಾಮ್‌ ಶೆಟ್ಟಿ, ಶಿರ್ವ ಗ್ರಾ. ಪಂ.ಅಧ್ಯಕ್ಷೆ ಸವಿತಾ ರಾಜೇಶ್‌ ಭಾಗವಹಿಸಲಿರುವರು.

ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿಯ ಪದಾಧಿಕಾರಿಗಳು,ಸದಸ್ಯರು, ಶಿಕ್ಷಣ ಸಂಸ್ಥೆಗಳ ಹಳೆ ವಿದ್ಯಾರ್ಥಿಸಂಘಗಳ ಪದಾಧಿಕಾರಿಗಳು, ಸದಸ್ಯರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಬೋಧಕ- ಬೋಧಕೇತರ ವೃಂದ ಮತ್ತು ಸಂಸ್ಥೆಗಳ ಹಿತೈಷಿಗಳು ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ,ಕಾಪು ಶಾಸಕ ಸುರೇಶ್‌ ಪಿ. ಶೆಟ್ಟಿ ಗುರ್ಮೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next