Advertisement
ಸೋಮವಾರ ಬೆಳಗ್ಗೆ ರಸ್ತೆ ದಾಟುತ್ತಿದ್ದಾಗ ಶಿರ್ವ ಕಡೆಯಿಂದ ಕಟಪಾಡಿ ಕಡೆಗೆ ಹೋಗುತ್ತಿದ್ದ ಬೈಕ್ ಢಿಕ್ಕಿ ಹೊಡೆದಿದೆ. ರಸ್ತೆಗೆ ಬಿದ್ದು ಇದ್ದು ಗಾಯಗೊಂಡಿದ್ದ ಅವರನ್ನು ಸ್ಥಳೀಯರು ಆ್ಯಂಬುಲೆನ್ಸ್‌ನಲ್ಲಿ ಉಡುಪಿಯ ಖಾಸಗಿ ಆಸ್ಪತ್ರೆಗೆ ಕೊಂಡು ಹೋಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಮಹಿಳೆ ಮೃತಪಟ್ಟಿದ್ದಾರೆಂದು ತಿಳಿಸಿದ್ದಾರೆ. ಬೈಕ್ ಸವಾರ ಸಂತೋಷ್ (22) ಕೂಡ ಗಾಯಗೊಂಡಿದ್ದು, ಅವರನ್ನು ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿರ್ವ ಪೇಟೆಯಲ್ಲಿ ಹಾದುಹೋಗುವ ರಾಜ್ಯ ಹೆದ್ದಾರಿಯ ದ್ವಿಪಥ ರಸ್ತೆಯಲ್ಲಿ ಶಿರ್ವ ಸಮುದಾಯ ಆರೋಗ್ಯ ಕೇಂದ್ರದಿಂದ ಪೆಟ್ರೋಲ್ ಪಂಪ್‌ನವರೆಗೆ ಡಿವೈಡರ್ ಇದ್ದು, ಅದರಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸಲಾಗಿದೆ. ಇದರಿಂದಾಗಿ ಡಿವೈಡರ್ ಹತ್ತಿ ರಸ್ತೆಗೆ ಇಳಿಯುವ ಪಾದಚಾರಿಗಳಿಗೆ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಕಾಣುವುದಿಲ್ಲ. ಫಲಕದಿಂದಾಗಿ ಬೈಕ್ ಕಾಣದೆ ಮಹಿಳೆ ರಸ್ತೆಗೆ ಇಳಿದಿದ್ದು, ವೇಗವಾಗಿ ಬರುತ್ತಿದ್ದ ಬೈಕ್ ಢಿಕ್ಕಿ ಹೊಡೆದಿದೆ. ಜೀವ ಹಾನಿಗೆ ಕಾರಣವಾದ ಫಲಕಗಳನ್ನು ಕೂಡಲೇ ತೆರವುಗೊಳಿಸಬೇಕೆಂದು ನಾಗರಿಕರು ಸಂಬಂಧಪಟ್ಟ ಇಲಾಖೆಯನ್ನು ಆಗ್ರಹಿಸಿದ್ದಾರೆ.