ಶಿರ್ವ: ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಸರ್ವೇಕ್ಷಣಾ ಘಟಕ ಉಡುಪಿ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಉಡುಪಿ, ಸಮುದಾಯ ಆರೋಗ್ಯ ಕೇಂದ್ರ ಶಿರ್ವ, ರೋಟರಿ ಕ್ಲಬ್ ಹಾಗೂ ಶಿರ್ವ ಗ್ರಾಮ ಪಂಚಾಯತ್ ಶಿರ್ವ ಇವುಗಳ ಸಹಯೋಗದೊಂದಿಗೆ ವಿಶ್ವ ತಂಬಾಕು ರಹಿತ ದಿನಾಚರಣೆ ಮತ್ತು ಎಚ್1ಎನ್1 ಮಾಹಿತಿ ಶಿಬಿರವು ಮೇ31ರಂದು ಶಿರ್ವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜರಗಿತು.
ಶಿರ್ವ ಗ್ರಾ.ಪಂ.ಅಧ್ಯಕ್ಷೆ ವಾರಿಜಾ ಪೂಜಾರ್ತಿ ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಅತಿಥಿ ಶಿರ್ವ ರೋಟರಿ ಅಧ್ಯಕ್ಷ ದೆಂದೂರು ದಯಾನಂದ ಶೆಟ್ಟಿ ಎಚ್1ಎನ್1 ಮಾಹಿತಿ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದರು.
ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ| ಸಂತೋಷ್ ಕುಮಾರ್ ಬೈಲೂರು ಮಾತನಾಡಿದರು. ಮುದರಂಗಡಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಸುಬ್ರಹ್ಮಣ್ಯ ಪ್ರಭು, ಆಶಾ ಕಾರ್ಯಕರ್ತೆಯರು ಮತ್ತು ಸಾರ್ವ ಜನಿಕರಿಗೆ ಎಚ್1ಎನ್1 ಕಾಯಿಲೆಯ ಬಗ್ಗೆ ಮಾಹಿತಿ ನೀಡಿದರು.
ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಸಿಬಂದಿ, ಅಶಾ ಕಾರ್ಯಕರ್ತೆ ಯರು ಮತ್ತು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಸಿಬಂದಿ ದಿನೇಶ್ ಸ್ವಾಗತಿಸಿ, ವಂದಿಸಿದರು.