Advertisement

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ವಾರಂಟ್ ಅಸಾಮಿ ಬಂಧನ

10:05 AM Mar 10, 2023 | Team Udayavani |

ಶಿರ್ವ: ಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2015ರಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Advertisement

ಪಡುಬಿದ್ರಿ ನಡ್ಸಾಲು ಕಂಚಿನಡ್ಕ ರೈಸ್‌ ಮಿಲ್ ಬಳಿಯ ನಿವಾಸಿ ಮಹಮ್ಮದ್ ತೌಫಿಕ್ ಪ್ರೊಕ್ಲೇಮಷನ್ ವಾರೆಂಟ್ ಅಸಾಮಿಯನ್ನು  ಶಿರ್ವ ಪೊಲೀಸ್ ಉಪನಿರೀಕ್ಷಕರಾದ ರಾಘವೇಂದ್ರ .ಸಿ  (ಕಾ & ಸು) ಹಾಗೂ ಅನಿಲ್ ಕುಮಾರ್ ಟಿ.ನಾಯ್ಕ್  (ತನಿಖೆ)  ಅವರ ಮಾರ್ಗದರ್ಶನದಂತೆ  ಮಾ.9 ರಂದು  ಪಡುಬಿದ್ರಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರ  ಸಹಕಾರದಿಂದ ಕಂಚಿನಡ್ಕದಲ್ಲಿ  ಮಾ.9 ರಂದು ಬಂಧಿಸಲಾಗಿದೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿ ಗೆ ಮಾ. 16ರ ವರೆಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿದೆ.

ಆರೋಪಿಯನ್ನು ಹಿರಿಯಡ್ಕ ಕಾರಾಗೃಹಕ್ಕೆ ಕಳುಹಿ‍ಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next