Advertisement
ವಾರದ ಹಿಂದೆ ಕೇವಲ ನೂರರ ಆಸುಪಾಸಿನಲ್ಲಿದ್ದ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಳ ಆಗುತ್ತಿರುವುದು ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಗೆ ಸವಾಲಾಗಿ ಪರಿಣಮಿಸಿದೆ. ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ಕೊರೊನಾ ಕರ್ಫ್ಯೂ ಜಾರಿಗೊಳಿಸಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಸಾರ್ವಜನಿಕರು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹೇಳಲಾಗಿದೆ. ಜನರ ಅನುಕೂಲಕ್ಕಾಗಿ ಬೆಳಿಗ್ಗೆ 6 ರಿಂದ 10ರವರೆಗೆ ಕರ್ಫ್ಯೂ ಸಡಿಲಿಕೆ ಮಾಡಲಾಗಿದ್ದು, ಕೆಲವರು ಇದನ್ನೇ ದುರ್ಬಳಕೆ ಮಾಡಿಕೊಳ್ಳುತ್ತಿ¨ ತರಕಾರಿ-ದಿನಸಿ, ಔಷ ಧ ಖರೀದಿ ನೆಪದಲ್ಲಿ ಮನೆಯಿಂದ ಹೊರಬಂದು ಬೇಕಾಬಿಟ್ಟಿಯಾಗಿ ತಿರುಗಾಡುವುದೂ ಕಂಡುಬರುತ್ತಿದೆ. ತರಕಾರಿ ಮಾರುಕಟ್ಟೆಯಲ್ಲಿ, ಕೆಲವು ಅಂಗಡಿಗಳಲ್ಲಿ ಹೋಟೆಲ್‌ಗಳಲ್ಲಿ ಹೆಚ್ಚಿನ ಜನಸಂದಣಿ ಕಾಣುತ್ತಿದ್ದು, ಸಾಮಾಜಿಕ ಅಂತರ ಪಾಲನೆ ಮಾಯವಾಗಿದೆ. ಕೆಲವರು ಮಾಸ್ಕ್ ಧರಿಸದೆ ನಿಯಮ ಉಲ್ಲಂಘನೆ ಮಾಡುತ್ತಿ¨ ಗಾಂಧಿ ಬಜಾರ್, ಎಪಿಎಂಸಿ ಮಾರುಕಟ್ಟೆ, ನೆಹರು ರಸ್ತೆ ಮತ್ತಿತರೆಡೆ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಈ ಬಗ್ಗೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಇನ್ನಷ್ಟು ಬಿಗಿ ಕ್ರಮ ಕೈಗೊಳ್ಳಬೇಕಿದೆ. ಕೆಲವಡೆ ಕೋವಿಡ್ ನಿಯಮಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಲಾಗುತ್ತಿದ್ದು, ಸೋಂಕಿನ ಪ್ರಮಾಣ ಮತ್ತಷ್ಟು ಹೆಚ್ಚಳವಾದರೂ ಆಶ್ಚರ್ಯವಿಲ್ಲ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೆ ಜನ ಸಹಕಾರ ನೀಡದಿದ್ದಲ್ಲಿ ಕೊರೊನಾ ಕಟ್ಟಿಹಾಕುವುದು ಕಷ್ಟಸಾಧ್ಯವಾಗಲಿದೆ. ಪೊಲೀಸ್ ಇಲಾಖೆಯಿಂದ ಬಿಗಿ ಕ್ರಮ: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಈಗಾಗಲೇ ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದು, ಅದನ್ನು ಮತ್ತಷ್ಟು ಬಿಗಿಗೊಳಿಸಿದೆ. ಕೊರೊನಾ ಕರ್ಫ್ಯೂ ಇದ್ದರೂ ನಗರದಲ್ಲಿ ಕಳೆದೆರಡು ದಿನಗಳಿಂದ ಓಡಾಡುವವರ ಸಂಖ್ಯೆ ಹೆಚ್ಚುತ್ತಿದ್ದು, ಪೊಲೀಸ್ ಇಲಾಖೆ ನಗರದ ಎಲ್ಲಾ ಕಡೆಗಳಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿ ಅನಗತ್ಯವಾಗಿ ಓಡಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ಕರ್ಫ್ಯೂ ಇದ್ದರೂ ಬೇಕಾಬಿಟ್ಟಿಯಾಗಿ ವಿವಿಧ ನೆಪ ಹೇಳಿಕೊಂಡು ತಿರುಗಾಡುತ್ತಿದ್ದವರಿಗೆ ಪೊಲೀಸರು ಎಚ್ಚರಿಕೆ ನೀಡುತ್ತಿದ್ದಾರೆ.
Advertisement
ಹೆಚ್ಚುತ್ತಿದೆ ಕೊರೊನಾ; ಎಚ್ಚರ ತಪ್ಪದಿರಲಿ ಜನ
07:07 PM May 02, 2021 | Shreeraj Acharya |
Advertisement
Udayavani is now on Telegram. Click here to join our channel and stay updated with the latest news.