Advertisement

ಏಕನಾಥ್ ಶಿಂಧೆ ಅವರನ್ನು ಪಕ್ಷದ ಎಲ್ಲಾ ಹುದ್ದೆಗಳಿಂದ ವಜಾಗೊಳಿಸಿದ ಉದ್ಧವ್ ಠಾಕ್ರೆ

08:22 AM Jul 02, 2022 | Team Udayavani |

ಮುಂಬೈ: ಬಿಜೆಪಿ ಬೆಂಬಲದೊಂದಿಗೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಏಕನಾಥ್ ಶಿಂಧೆ ಅವರನ್ನು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಶುಕ್ರವಾರ ಪಕ್ಷದ ಎಲ್ಲಾ ಹುದ್ದೆಗಳಿಂದ ತೆಗೆದು ಹಾಕಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಕ್ಕಾಗಿ ಶಿಂಧೆ ಅವರನ್ನು ಪದಚ್ಯುತಗೊಳಿಸಲಾಗಿದೆ ಎಂದು ಶಿವಸೇನೆ ಹೇಳಿಕೆಯಲ್ಲಿ ತಿಳಿಸಿದೆ.

Advertisement

ಶಿಂಧೆ ಅವರು ಪಕ್ಷದ ಸದಸ್ಯತ್ವವನ್ನೂ ತ್ಯಜಿಸಿರುವುದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಗುರುವಾರ, ಏಕನಾಥ್ ಶಿಂಧೆ ಮಹಾರಾಷ್ಟ್ರದ 20 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಿಜೆಪಿಯ ದೇವೇಂದ್ರ ಫಡ್ನವಿಸ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಇದನ್ನೂ ಓದಿ:ನಗರಗಳಿಗೆ ನಮ್ಮ ಕ್ಲಿನಿಕ್‌: ಸಿಎಂ ನೇತೃತ್ವದ ರಾಜ್ಯ ಸಂಪುಟ ಸಭೆಯಲ್ಲಿ ತೀರ್ಮಾನ

ಅಚ್ಚರಿಯ ನಡೆಯಲ್ಲಿ, ಶಿವಸೇನೆಯಲ್ಲಿ ಬಂಡಾಯದ ನೇತೃತ್ವ ವಹಿಸಿದ್ದ ಶಿಂಧೆ ಅವರು ಹೊಸ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಫಡ್ನವೀಸ್ ಘೋಷಿಸಿದ್ದರು, ಆದರೆ ತಾನು ಹೊಸ ಸರ್ಕಾರದಿಂದ ಹೊರಗುಳಿಯುದಾಗಿ ಹೇಳಿದ್ದ ಫಡ್ನವೀಸ್ ಬಳಿಕ ತಮ್ಮ ನಿಲುವು ಬದಲಿಸಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

Advertisement

ಶಾ ಮೋಸ ಮಾಡಿದರು: “2019ರಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಮ್ಮ ಮಾತಿಗೆ ಬದ್ಧರಾಗಿ ಇದ್ದಿದ್ದರೆ ಮಹಾ ವಿಕಾಸ್‌ ಅಘಾಡಿ ರಚನೆ ಮಾಡುವ ಅಗತ್ಯವೇ ಇರುತ್ತಿರಲಿಲ್ಲ. ಶಿವಸೇನೆಯ ಮುಖಂಡರನ್ನು ಮುಖ್ಯಮಂತ್ರಿ ಮಾಡುವುದಿದ್ದರೆ 2019 ರಲ್ಲಿಯೇ ಮಾಡಬಹುದಿತ್ತಲ್ಲ?’  ಎಂದು ಶಿವಸೇನೆಯ ಮುಖ್ಯಸ್ಥ, ಮಾಜಿ ಸಿಎಂ ಉದ್ಧವ್‌ ಠಾಕ್ರೆ ಕಟುವಾಗಿ ಪ್ರಶ್ನೆ ಮಾಡಿದ್ದಾರೆ.

ಅಧಿಕಾರ ಕಳೆದುಕೊಂಡ ಬಳಿಕ ಮೊದಲ ಬಾರಿಗೆ ಮುಂಬೈನಲ್ಲಿರುವ ಶಿವಸೇನೆಯ ಪ್ರಧಾನ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಸೇನೆಯವರನ್ನೇ ಸಿಎಂ ಹುದ್ದೆಗೆ ಆಯ್ಕೆ ಮಾಡುವುದೇ ಆಗಿದ್ದರೆ, 2019ರ ಚುನಾವಣೆ ವೇಳೆ ಯಾಕೆ ನಿರ್ಧಾರ ಕೈಗೊಳ್ಳಲಿಲ್ಲ. ಆ ಸಂದರ್ಭ ದಲ್ಲಿಯೇ ಪ್ರಸ್ತಾಪಕ್ಕೆ ಒಪ್ಪಿಕೊಂಡಿರು ತ್ತಿದ್ದರೆ, ಈಗಿನ ಪರಿಸ್ಥಿತಿಯೇ ಬರುತ್ತಿರಲಿಲ್ಲ ಎಂದರು.

ಮುಖ್ಯಮಂತ್ರಿ ಸ್ಥಾನದ ಹಂಚಿಕೆಯ ಬಗ್ಗೆ ಆಗ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಜತೆಗೆ ಚರ್ಚೆ ನಡೆಸಲಾಗಿತ್ತು. ಅವರು ಕೊಟ್ಟ ಮಾತಿಗೆ ನಡೆಯದೆ, ಮೋಸ ಮಾಡಿದರು ಎಂದು ಆರೋಪಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next