ಮುಂಬೈ: ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವಿನ ಗಡಿ ವಿವಾದವು ತೀವ್ರ ಸ್ವರೂಪ ಪಡೆದಿರುವ ನಡುವೆ, ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ ಬುಧವಾರ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಬೇಕೆಂದು ಒತ್ತಾಯಿಸಿದ್ದಾರೆ ಮತ್ತು ಬೆಳಗಾವಿಯಲ್ಲಿ ಅಹಿತಕರ ಘಟನೆಗಳು ದೆಹಲಿಯ ಬೆಂಬಲ”ವಿಲ್ಲದೆ ನಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ವಿರುದ್ಧವೂ ರಾವತ್ ವಾಗ್ದಾಳಿ ನಡೆಸಿ, ಇಂತಹ ದಾಳಿಗಳನ್ನು ಎದುರಿಸಲು ರಾಜ್ಯ ಸರ್ಕಾರ ದುರ್ಬಲ ಮತ್ತು ಅಸಹಾಯಕವಾಗಿದೆ. ಕರ್ನಾಟಕದ ಯಾವುದೇ ಮುಖ್ಯಮಂತ್ರಿಗಳು ಸೋಲಾಪುರ ಮತ್ತು ಸಾಂಗ್ಲಿಯ ಗ್ರಾಮಗಳಲ್ಲಿ ಹಕ್ಕು ಸಾಧಿಸದ ಕಾರಣ ಮಹಾರಾಷ್ಟ್ರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿದರು.
ಇದಕ್ಕೆ ತಿರುಗೇಟು ನೀಡಿರುವ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ, ರಾಜ್ಯಸಭಾ ಸದಸ್ಯರಿಗೆ ಆಧಾರರಹಿತ ಮತ್ತು ಪ್ರಚೋದನಕಾರಿ ಕಾಮೆಂಟ್‌ಗಳನ್ನು ಮಾಡದಂತೆ ಕೇಳಿಕೊಂಡರು.
ಬೆಳಗಾವಿ ಜಿಲ್ಲೆಯ ಹಿರೇಬೌಗವಾಡಿಯ ಟೋಲ್ ಬೂತ್ ಬಳಿ ಮಹಾರಾಷ್ಟ್ರ ಕಡೆಯಿಂದ ಕರ್ನಾಟಕಕ್ಕೆ ಪ್ರವೇಶಿಸುವ ವಾಹನಗಳ ಮೇಲೆ ಕಲ್ಲು ತೂರಾಟದ ಮೂಲಕ ಉಭಯ ರಾಜ್ಯಗಳ ನಡುವಿನ ದಶಕಗಳ ಹಳೆಯದ ವಿವಾದ ಮಂಗಳವಾರ ತೀವ್ರಗೊಂಡಿದೆ. ಅದೇ ರೀತಿ, ಪುಣೆಯಲ್ಲಿ ಕರ್ನಾಟಕದ ಕನಿಷ್ಠ ನಾಲ್ಕು ಬಸ್‌ಗಳನ್ನು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಬಣ ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಕಾರ್ಯಕರ್ತರು ವಿರೂಪಗೊಳಿಸಿದ್ದಾರೆ.