Advertisement

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು; ಗವರ್ನರ್ ವಿರುದ್ಧ ಸುಪ್ರೀಂಗೆ ಮೊರೆ

09:50 AM Nov 13, 2019 | Nagendra Trasi |

ನವದೆಹಲಿ: ಮಹಾರಾಷ್ಟ್ರದಲ್ಲಿ ಸರಕಾರ ರಚನೆ ಕಗ್ಗಂಟು ಮುಂದುವರಿದಿರುವ ನಡುವೆಯೇ ರಾಜ್ಯಪಾಲರಾದ ಭಗತ್ ಸಿಂಗ್ ಕೋಶಿಯಾರ್ ರಾಷ್ಟ್ರಪತಿ ಆಡಳಿತ ಹೇರಿಕೆಗೆ ಶಿಫಾರಸ್ಸು ಮಾಡಿದ್ದು, ಈ ಬೆಳವಣಿಗೆ ಹಿನ್ನೆಲೆಯಲ್ಲಿ ಗವರ್ನರ್ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋಗಲು ಶಿವಸೇನೆ ನಿರ್ಧರಿಸಿದೆ.

Advertisement

ಸರ್ಕಾರ ರಚಿಸಲು ಹಾಗೂ ಬಹುಮತ ಸಾಬೀತುಪಡಿಸಲು ಮೂರು ದಿನಗಳ ಕಾಲಾವಕಾಶ ನೀಡಲು ನಿರಾಕರಿಸಿದ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ವಿರುದ್ಧ ದೂರು ದಾಖಲಿಸುವುದಾಗಿ ಶಿವಸೇನೆ ತಿಳಿಸಿದೆ.

ಶಿವಸೇನಾದ ಮುಖ್ಯಸ್ಥ ಉದ್ಧವ್ ಠಾಕ್ರೆ ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ಭೇಟಿಯಾಗಿ ಕಾನೂನು ಸಮರ ನಡೆಸುವ ಬಗ್ಗೆ ಸಮಾಲೋಚನೆ ನಡೆಸಿರುವುದಾಗಿ ವರದಿ ವಿವರಿಸಿದೆ.

ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸುವ ಬಗ್ಗೆ ಎನ್ ಸಿಪಿ ವಿಫಲವಾಗಿದ್ದು, ಈ ಬಗ್ಗೆ ರಾಷ್ಟ್ರಪತಿ ಆಡಳಿತ ಹೇರಿಕೆ ಕುರಿತು ಗವರ್ನರ್ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಏತನ್ಮಧ್ಯೆ ಬ್ರೆಜಿಲ್ ಗೆ ತೆರಳಲಿರುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ನಡೆಯಲಿದೆ ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next