ಪಾಟ್ನಾ: ಶಿವಸೇನೆ (ಉದ್ಧವ್ ಠಾಕ್ರೆ ಬಣ) ನಾಯಕ ಆದಿತ್ಯ ಠಾಕ್ರೆ ಅವರು ಬಿಹಾರ ಸಿಎಂ ನಿತೀಶ್ ಕುಮಾರ್ ಅವರನ್ನು ಬುಧವಾರ ಅವರ ನಿವಾಸದಲ್ಲಿ ಭೇಟಿ ಮಾಡಿದರು.ಈ ವೇಳೆ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ಶಿವಸೇನೆ ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು ಹಾಜರಿದ್ದರು.
ಕಾನೂನು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವುದು ಪ್ರಸ್ತುತ ಸವಾಲು ಮತ್ತು ಅದನ್ನು ಉಳಿಸಲು ನಾವು ಏನು ಬೇಕಾದರೂ ಮಾಡುತ್ತೇವೆ ಎಂದು ಆದಿತ್ಯ ಠಾಕ್ರೆ ಅವರನ್ನು ಭೇಟಿ ಮಾಡಿ ಮಾತು ಕತೆ ನಡೆಸಿದ ನಂತರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಹೇಳಿಕೆ ನೀಡಿದ್ದಾರೆ.
ನಾವು ಪರಸ್ಪರ ಸಂಪರ್ಕದಲ್ಲಿದ್ದೇವೆ ಆದರೆ ಕೋವಿಡ್‌ನಿಂದಾಗಿ ಭೇಟಿಯಾಗಲು ಸಾಧ್ಯವಾಗಲಿಲ್ಲ. ನಾವು ವಿವಿಧ ವಿಷಯಗಳನ್ನು ಚರ್ಚಿಸಿದ್ದೇವೆ ಆದರೆ ರಾಜಕೀಯವನ್ನು ಚರ್ಚಿಸಲಿಲ್ಲ. ಈ ಸ್ನೇಹ ಮುಂದುವರಿಯುವುದು ಖಚಿತ ಎಂದು ಆದಿತ್ಯ ಠಾಕ್ರೆ ಹೇಳಿಕೆ ನೀಡಿದ್ದಾರೆ.