Advertisement
ನಗರದ ಜಿಲ್ಲಾ ರಂಗಮಂದಿರದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಛತ್ರಪತಿ ಶಿವಾಜಿ ಮಹಾರಾಜ ಜಯಂತ್ಯುತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರಿಗೆ ವಿಶೇಷ ಗೌರವ ಕಲ್ಪಿಸಿದ ಆದರ್ಶ ರಾಜರಾಗಿದ್ದರು ಎಂದರು.
ಆದರ್ಶಗಳು, ರಾಷ್ಟ್ರೀಯತೆ ಮತ್ತು ದೇಶಭಕ್ತಿ ಗುಣಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಶಾಸಕರು ಹಾಗೂ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ರಹೀಮ್ ಖಾನ್ ಮಾತನಾಡಿ, ಶಿವಾಜಿ ಮಹಾರಾಜರು ಎಲ್ಲಾ ಜನರನ್ನು ಸಮಾನವಾಗಿ ಪರಿಗಣಿಸಿದ್ದ ಮಹಾತ್ಮರಾಗಿದ್ದಾರೆ. ಅವರ ಆಸ್ಥಾನದಲ್ಲಿ 12 ಬಹದೊಡ್ಡ ಹುದ್ದೆಗಳಲ್ಲಿ ಸುಮಾರು 12 ಮುಸ್ಲಿಮರು ಕರ್ತವ್ಯ ನಿರ್ವಹಿಸುತ್ತಿದ್ದರು. ಅಸಂಖ್ಯಾತ ಮುಸ್ಲಿಮ್ ಸೈನಿಕರಿದ್ದರು ಎಂದು ಹೇಳಿದರು.
Related Articles
Advertisement
ಜಿಪಂ ಉಪಾಧ್ಯಕ್ಷ ಡಾ| ಪ್ರಕಾಶ ಪಾಟೀಲ ಮಾತನಾಡಿ, ಶಿವಾಜಿ ಮಹಾರಾಜರ ಯುದ್ಧ ಯಾವುದೇ ಧರ್ಮದ ವಿರುದ್ಧ ಅಲ್ಲದೇ ಸಮಾಜಕ್ಕೆ ಕಳಂಕವಾಗಿದ್ದ ಅಸಮಾನತೆ, ಅನ್ಯಾಯ, ಅತ್ಯಾಚಾರ, ದೌರ್ಜನ್ಯದಂತಹ ದುಷ್ಠ ಶಕ್ತಿಗಳ ವಿರುದ್ಧವಾಗಿತ್ತು ಎಂದು ಹೇಳಿದರು.
ಹಿಂಗೋಲಿ ಜಿಲ್ಲೆಯ ಬಹಿರ್ಜಿ ಸ್ಮಾರಕ ಮಹಾವಿದ್ಯಾಲಯದ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ| ರಾಮಭಾವು ಮೊಟಕುಳೆ ಉಪನ್ಯಾಸ ನೀಡಿದರು. ಜಿಪಂ ಅಧ್ಯಕ್ಷೆ ಭಾರತಬಾಯಿ ಶೇರಿಕಾರ, ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್, ಕಂಠೀರವ ಸ್ಟುಡಿಯೋ ನಿಯಮಿತದ ಅಧ್ಯಕ್ಷೆ ಮೀನಾಕ್ಷಿ ಸಂಗ್ರಾಮ, ಬೀದರ ನಗರಾಭಿವೃದ್ಧಿ ಪ್ರಾಧಿ ಕಾರದ ಅಧ್ಯಕ್ಷ ಸಂಜಯ ಜಾಗೀರದಾರ, ಸಮಾಜದ ಮುಖಂಡ ಮುರುಳಿಧರರಾವ್ ಕಾಳೆ, ತಹಶೀಲ್ದಾರ ಕೀರ್ತಿ ಚಾಲಕ್ ಹಾಗೂ ಇತರರು ಇದ್ದರು. ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ವಟಗೆ ಸ್ವಾಗತಿಸಿದರು. ಪ್ರಾಂಶುಪಾಲ ಚನ್ನಬಸವ ಹೇಡೆ ನಿರೂಪಿಸಿದರು.