ಪುಣೆ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಪುಣೆಯಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್ ಸಿಪಿ) ನಾಯಕ ಶರದ್ ಪವಾರ್ ಅವರೊಂದಿಗೆ ವೇದಿಕೆ ಹಂಚಿಕೊಂಡರು. ತಿಂಗಳ ಹಿಂದೆ ಎನ್ ಸಿಪಿ ನಾಯಕ ಅಜಿತ್ ಪವಾರ್ ಅವರು ಬಿಜೆಪಿ ಮತ್ತು ಶಿಂಧೆ ಬಣದ ಶಿವಸೇನೆ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡಿದ ಬಳಿಕ ಇದೇ ಮೊದಲ ಬಾರಿಗೆ ಮೋದಿ ಅವರು ಶರದ್ ಪವಾರ್ ಅವರೊಂದಿಗೆ ವೇದಿಕೆ ಹಂಚಿಕೊಂಡರು.
ಸಮಾರಂಭದಲ್ಲಿ ಪ್ರಧಾನಿ ಮೋದಿ ಮತ್ತು ಶರದ್ ಪವಾರ್ ನಗು ವಿನಿಮಯ ಮಾಡಿಕೊಂಡರು. ಇದೇ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪ್ರತಿಷ್ಠಿತ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಇದನ್ನೂ ಓದಿ:‘ಆಟಗಾರರಿಗೆ ದುರಹಂಕಾರ’ ಎಂಬ ಕಪಿಲ್ ದೇವ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಜಡ್ಡು
ಕಾರ್ಯಕ್ರಮಕ್ಕೆ ಆಗಮಿಸಿ ಪ್ರತಿಪಕ್ಷಗಳಲ್ಲಿ ಗೊಂದಲ ಮೂಡಿಸಿದ್ದ ಶರದ್ ಪವಾರ್ ಅವರು ಅದೇ ವೇದಿಕೆಯಲ್ಲಿದ್ದ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. “ಶಿವಾಜಿ ಮಹಾರಾಜರು ಎಂದೂ ಯಾರ ಜಾಗವನ್ನೂ ಕಿತ್ತುಕೊಳ್ಳಲಿಲ್ಲ” ಎಂದರು. ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದ ಪತನಕ್ಕೆ ಕಾರಣವಾದ ಕಳೆದ ವರ್ಷ ಶಿವಸೇನೆಯಲ್ಲಿನ ವಿಭಜನೆಯ ಬಗ್ಗೆ ಶರದ್ ಪವಾರ್ ಕುಟುಕಿದ್ದಾರೆ ಎಂದು ಇದನ್ನು ವಿಶ್ಲೇಷಿಸಲಾಗುತ್ತಿದೆ.
ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಪ್ರಧಾನಿ, ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು 140 ಕೋಟಿ ಭಾರತೀಯರಿಗೆ ಅರ್ಪಿಸುವುದಾಗಿ ಹೇಳಿದರು.
ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಅವರ ಕೊಡುಗೆಯನ್ನು ನಾವು ಕೆಲವು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಲೋಕಮಾನ್ಯ ತಿಲಕರು ಯುವ ಪ್ರತಿಭೆಗಳನ್ನು ಗುರುತಿಸುವ ವಿಶಿಷ್ಟ ಸಾಮರ್ಥ್ಯವನ್ನು ಹೊಂದಿದ್ದರು. ವೀರ್ ಸಾವರ್ಕರ್ ಅಂತಹ ಒಂದು ಉದಾಹರಣೆ” ಎಂದು ಮೋದಿ ಹೇಳಿದರು.