Advertisement
ಎಡಿಸಿ ಎಂ.ಪಿ. ಮಾರುತಿ ಅವರು ಶಿವಾಜಿ ಮಹಾರಾಜ ಮತ್ತು ಸವಿತಾ ಮಹರ್ಷಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
Related Articles
Advertisement
ಪಟ್ಟಣದ ಪುರಸಭೆ ಕಚೇರಿಯಲ್ಲಿ ಶುಕ್ರವಾರ ನಡೆದ ಛತ್ರಪತಿ ಶಿವಾಜಿ ಹಾಗೂ ಸವಿತಾ ಮಹರ್ಷಿಗಳ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪುರಸಭೆ ಮುಖ್ಯಾಧಿಕಾರಿ ಎನ್.ಶಿವಲಿಂಗಪ್ಪ ಮಾತನಾಡಿ, ಛತ್ರಪತಿ ಶಿವಾಜಿ ದೇಶ ಹಾಗೂ ಸಮಾಜದ ಒಳಿತಿಗೆ ಶ್ರಮಿಸುವ ಮೂಲಕ ಮಹಾನ್ ನಾಯಕರೆನಿಸಿಕೊಂಡವರು. ಅವರ ಆದರ್ಶ ಮೈಗೂಡಿಸಿಕೊಳ್ಳಬೇಕು. ಅಂದಾಗ ಮಾತ್ರ ಅವರ ಜಯಂತಿಗಳ ಆಚರಣೆಗೆ ಅರ್ಥಬರುತ್ತದೆ ಎಂದರು. ಪುರಸಭೆ ಅಧಿಕಾರಿಗಳಾದ ರಾಘವೇಂದ್ರ, ಮಂಜುನಾಥ, ಅಕ್ಷತಾ, ಪುಷ್ಪಾವತಿ, ಎಚ್.ಪರಮೇಶ್ವರ, ಚನ್ನಬಸವ, ಸಿಬ್ಬಂದಿ ಇತರರು ಇದ್ದರು.
ವಿವಿಧೆಡೆ ಆಚರಣೆ: ಛತ್ರಪತಿ ಶಿವಾಜಿ ಹಾಗೂ ಸವಿತಾ ಮಹರ್ಷಿಗಳ ಜಯಂತಿಯನ್ನು ಪಟ್ಟಣದ ವಿವಿಧೆಡೆ ಸಡಗರ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ಶ್ರೀ ಶರಣ ಬಸವೇಶ್ವರ ವಿದ್ಯಾ ಸಂಸ್ಥೆಯಲ್ಲಿ, ರಾಜೀವ್ ಗಾಂಧಿ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೇರಿದಂತೆ ವಿವಿಧೆಡೆ ಇಬ್ಬರು ಮಹನೀಯರ ಜಯಂತಿ ಆಚರಿಸಿದರು. ಶಾಲೆಯ ಶಿಕ್ಷಕ ಶಿಕ್ಷಕಿಯರು, ಸವಿತಾ ಸಮಾಜದ ಮುಖಂಡರು ಸಿಬ್ಬಂದಿ ಇತರರು ಇದ್ದರು.