Advertisement

Shivaji;ಕುಸಿದು ಬಿದ್ದ 2023 ರಲ್ಲಿ ಪ್ರಧಾನಿ ಅನಾವರಣ ಮಾಡಿದ ಶಿವಾಜಿ ಪ್ರತಿಮೆ!!

08:43 PM Aug 26, 2024 | Team Udayavani |

ಸಿಂಧದುರ್ಗ(ಮಹಾರಾಷ್ಟ್ರ): ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ರಾಜ್‌ಕೋಟ್ ನಲ್ಲಿ ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ್ದ ಮರಾಠ ಸಾಮ್ರಾಜ್ಯದ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ 35 ಅಡಿ ಪ್ರತಿಮೆ ಸೋಮವಾರ(ಆ 26) ಮಧ್ಯಾಹ್ನ 1 ಗಂಟೆಗೆ ಕುಸಿದು ಬಿದ್ದಿದೆ.

Advertisement

ಬಲವಾದ ಗಾಳಿಯಿಂದಾಗಿ ಪ್ರತಿಮೆ ಕುಸಿದಿದೆ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. ಈ ವಿದ್ಯಮಾನ ಭಾರೀ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದ್ದು, ಕಾಮಗಾರಿಯ ಗುಣಮಟ್ಟದ ಕುರಿತು ಪ್ರಶ್ನೆಗಳನ್ನು ಎತ್ತಲಾಗಿದೆ.

ಕಳೆದ ಎರಡು ಮೂರು ದಿನಗಳಿಂದ ಭಾರೀ ಮಳೆ ಮತ್ತು ಗಾಳಿ ಬೀಸುತ್ತಿದ್ದು, ಇದೆ ವೇಳೆ ಪ್ರತಿಮೆ ಕುಸಿದಿದೆ. ಕಳೆದ ವರ್ಷ ಡಿಸೆಂಬರ್ 4 ರಂದು ನೌಕಾಪಡೆಯ ದಿನದಂದು ಪ್ರಧಾನಿ ಮೋದಿ ಅವರು ಪ್ರತಿಮೆಯನ್ನು ಅನಾವರಣಗೊಳಿಸಿದ್ದರು. ಮಾಲ್ವಾಣ್ ನ ರಾಜ್‌ಕೋಟ್ ಕೋಟೆಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಪ್ರಧಾನಿ ಭಾಗವಹಿಸಿದ್ದರು.

ಪೊಲೀಸ್ ಮತ್ತು ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಪರಿಸ್ಥಿತಿಯನ್ನು ಅವಲೋಕಿಸಲು ಸ್ಥಳಕ್ಕೆ ದೌಡಾಯಿಸಿದ್ದು, ಹಾನಿಯನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಸಿಎಂ ಪ್ರತಿಕ್ರಿಯೆ
ಸಿಎಂ ಶಿಂಧೆ ”ನಾವು ಶಿವಾಜಿ ಮಹಾರಾಜ್ ಅವರನ್ನು ನಮ್ಮ ಭಾವನೆಗಳನ್ನು ಜೋಡಿಸಿದ್ದೇವೆ. ನಾವು ಅವರನ್ನು ದೇವರಂತೆ ಪೂಜಿಸುತ್ತೇವೆ. ಬಲವಾದ ಗಾಳಿಯಿಂದಾಗಿ ಪ್ರತಿಮೆ ಕುಸಿದಿದೆ. ಇದು ದುರದೃಷ್ಟಕರ. ನಮ್ಮ ಸಚಿವರು ಅಲ್ಲಿಗೆ ಹೋಗಿದ್ದು ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ.” ಎಂದು ಪ್ರತಿಕ್ರಿಯಿಸಿದ್ದಾರೆ.

ಶಿವಸೇನಾ (ಯುಬಿಟಿ) ಶಾಸಕ ವೈಭವ್ ನಾಯ್ಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳಪೆ ಕಾಮಗಾರಿಯಿಂದ ಪ್ರತಿಮೆ ಕುಸಿದಿದೆ ಎಂದು ಶಿವಸೇನಾ (ಯುಬಿಟಿ) ಆರೋಪಿಸಿದೆ. ವಿಪಕ್ಷಗಳಾದ ಕಾಂಗ್ರೆಸ್, ಎನ್ ಸಿಪಿ(ಎಸ್ ಪಿ) ರಾಜ್ಯ ಸರ್ಕಾರವು ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಯತ್ನಿಸಬಹುದು. ಪ್ರತಿಮೆಯ ನಿರ್ಮಾಣ ಮತ್ತು ಸ್ಥಾಪನೆಗೆ ಕಾರಣರಾದ ವ್ಯಕ್ತಿಗಳನ್ನು ಕೂಲಂಕಷವಾಗಿ ತನಿಖೆ ಮಾಡಬೇಕು” ಎಂದು ಕಿಡಿ ಕಾರಿವೆ.

Advertisement

Udayavani is now on Telegram. Click here to join our channel and stay updated with the latest news.

Next