Advertisement

ಹೊರಬಂತು ‘ಶಿವಾಜಿ ಸುರತ್ಕಲ್‌-2′ಹಾಡು

05:29 PM Mar 16, 2023 | Team Udayavani |

ರಮೇಶ್‌ ಅರವಿಂದ್‌ ನಟನೆಯ “ಶಿವಾಜಿ ಸುರತ್ಕಲ್‌-2′ ಚಿತ್ರ ಚಿತ್ರೀಕರಣ ಪೂರೈಸಿದ್ದು, ಏಪ್ರಿಲ್‌ 14ರಂದು ಬಿಡುಗಡೆಯಾಗಲಿದೆ. ಈಗ ಮೊದಲ ಹಂತವಾಗಿ ಚಿತ್ರದ ಹಾಡೊಂದು ಇದೀಗ ಬಿಡುಗಡೆಯಾಗಿದೆ. ಈ ಮೂಲಕ ಚಿತ್ರತಂಡ ಪ್ರಚಾರ ಕಾರ್ಯಕ್ಕೆ ಮುನ್ನುಡಿ ಹಾಕುತ್ತಿದೆ.

Advertisement

ಆಕಾಶ್‌ ಶ್ರೀವತ್ಸ ಚಿತ್ರಕಥೆ ಬರೆದು, ಸಂಕಲನ ಮಾಡಿ, ನಿರ್ದೇಶನ ಮಾಡಿರುವ ಈ ಚಿತ್ರವನ್ನು ಅಂಜನಾದ್ರಿ ಸಿನಿ ಕ್ರಿಯೇಶನ್ಸ್‌ ಮೂಲಕ ಅನೂಪ್‌ ಗೌಡ ಮತ್ತು ರೇಖಾ ಕೆ ಎನ್‌ ನಿರ್ಮಾಣ ಮಾಡಿದ್ದಾರೆ. ಚಿತ್ರದ ಕೊನೆಯ ಒಂದು ಹಾಡಿನ ಚಿತ್ರೀಕರಣವನ್ನು ಇತ್ತೀಚೆಗಷ್ಟೇ ಚಿತ್ರತಂಡ ಮುಗಿಸಿದೆ.

ಈ ಹಾಡಿನಲ್ಲಿ ಸಂಗೀತಾ ಶೃಂಗೇರಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ರಮೇಶ್‌ ಅರವಿಂದ್‌, ರಾಧಿಕಾ ನಾರಾಯಣ್‌, ಮೇಘನಾ ಗಾಂವ್ಕರ್‌, ರಾಘು ರಮಣಕೊಪ್ಪ, ವಿದ್ಯಾ ಮೂರ್ತಿ, ಆರಾಧ್ಯ ಸೇರಿದಂತೆ ಹಲವಾರು ಕಲಾವಿದರು ನಟಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next