ಬೆಂಗಳೂರು: ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಕೊನೆ ಕ್ಷಣದಲ್ಲಿ ದೆಹಲಿ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ರಾಷ್ಟ್ರ ರಾಜಧಾನಿಗೆ ಹೋಗುತ್ತಿರುವುದಾಗಿ ಖಚಿತಪಡಿಸಿದ ಕೆಲವೇ ಗಂಟೆಗಳ ನಂತರ ಭೇಟಿ ರದ್ದು ಮಾಡಿರುವುದು ಕಾಂಗ್ರೆಸ್ ಆಡಳಿತ ಪಾಳೆಯದಲ್ಲಿ ಎನೋ ಸರಿಯಿಲ್ಲ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ.
ಡಿ ಕೆ ಶಿವಕುಮಾರ್ ಅವರು ತಮ್ಮ ಪ್ರಯಾಣದ ರದ್ದು ಮಾಡಲು ಆರೋಗ್ಯ ಕಾರಣಗಳನ್ನು ಉಲ್ಲೇಖಿಸಿದ್ದಾರೆ.ನನಗೆ ಹೊಟ್ಟೆಯಲ್ಲಿ ಸ್ವಲ್ಪ ಸಮಸ್ಯೆ ಇದೆ. ಹತ್ತು ನಿಮಿಷದಲ್ಲಿ ಡಾಕ್ಟರ್ ಬರುತ್ತಾರೆ. . ಏನೋ ಸೋಂಕು ತಗುಲಿರುವಂತೆ ತೋರುತ್ತಿದೆ ಮತ್ತು ನನಗೆ ಜ್ವರವಿದೆ….. ದಯವಿಟ್ಟು ನನ್ನನ್ನು ಸ್ವಲ್ಪ ಬಿಟ್ಟು ಕೊಡಿ….” ಎಂದು ಶಿವಕುಮಾರ್ ಸುದ್ದಿಗಾರರಲ್ಲಿ ಕೇಳಿಕೊಂಡರು.ಅವರು ಇಂದು ದೆಹಲಿಗೆ ಹೋಗುತ್ತಿಲ್ಲ ಎಂದು ಅವರ ಆಪ್ತ ಮೂಲಗಳು ಖಚಿತಪಡಿಸಿವೆ.
135 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವ ಪಕ್ಷದ ನೇತೃತ್ವದ ಸರ್ಕಾರವನ್ನು ಯಾರು ಮುನ್ನಡೆಸುತ್ತಾರೆ ಎಂಬುದರ ಕುರಿತು ಸಿದ್ದರಾಮಯ್ಯ ಅವರೊಂದಿಗೆ ಕಾಂಗ್ರೆಸ್ ಹಿರಿಯ ನಾಯಕ ಡಿ ಕೆ ಶಿವಕುಮಾರ್ ತೀವ್ರ ಪೈಪೋಟಿಯಲ್ಲಿ ಸಿಲುಕಿದ್ದು. ಎಐಸಿಸಿ ನಾಯಕರನ್ನು ಭೇಟಿ ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯ ಸೋಮವಾರ ಮಧ್ಯಾಹ್ನದ ವೇಳೆಗೆ ದೆಹಲಿಗೆ ತೆರಳಿದ್ದರು.
ಇನ್ನೊಂದೆಡೆ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜತೆ ಜತೆ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರು ಮಹತ್ವದ ಚರ್ಚೆ ನಡೆಸುತ್ತಾರೆ.