Advertisement

ದಾಳಿ ರಾಜಕೀಯ ಪ್ರೇರಿತ, BJP ಐಟಿ ಬ್ರಹ್ಮಾಸ್ತ್ರ ಪ್ರಯೋಗಿಸುತ್ತಿದೆ;CM

01:49 PM Aug 02, 2017 | Team Udayavani |

ಬೆಂಗಳೂರು: ಕಾಂಗ್ರೆಸ್ ಮುಖಂಡ, ಇಂಧನ ಸಚಿವ ಡಿಕೆ ಶಿವಕುಮಾರ್ ಅವರನ್ನು ಗುರಿಯಾಗಿರಿಸಿಕೊಂಡು ಆದಾಯ ತೆರಿಗೆ ಇಲಾಖೆ ನಡೆಸಿರುವ ದಾಳಿಯ ಹಿಂದೆ ಕೇಂದ್ರದ ಕೈವಾಡ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

Advertisement

ದಾಳಿ ಹಿಂದೆ ಕೇಂದ್ರದ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಐಟಿ ಇಲಾಖೆಯನ್ನು ಬಳಸಿಕೊಳ್ಳುವುದು ಕೇಂದ್ರಕ್ಕೆ ಶೋಭೆ ತರುವುದಿಲ್ಲ. ತನ್ನ ವಿರುದ್ಧ ಧ್ವನಿ ಎತ್ತುವವರ ವಿರುದ್ಧ ಬಿಜೆಪಿ ಐಟಿ ದಾಳಿ ನಡೆಸುತ್ತಿದೆ ಎಂದು ದೂರಿದರು. ಕೇಂದ್ರದ ಇಂತಹ ಬೆದರಿಕೆಗಳಿಗೆ ಬಗ್ಗುವುದಿಲ್ಲ ಎಂದು ಹೇಳಿದರು.

ದಾಳಿ ವೇಳೆ ಐಟಿ ಅಧಿಕಾರಿಗಳು ನಿಯಮಾನುಸಾರ ಸ್ಥಳೀಯ ಪೊಲೀಸರ ನೆರವು ಪಡೆದುಕೊಳ್ಳಬೇಕು. ಆದರೆ ನಿಯಮ ಉಲ್ಲಂಘಿಸಿ ಸಿಆರ್ ಪಿಎಫ್ ಸಿಬ್ಬಂದಿಯನ್ನು ಬಳಸಿಕೊಂಡಿದ್ದಾರೆ. ಆಡಳಿತಾರೂಢ ಕೇಂದ್ರ ಸರ್ಕಾರ ಐಟಿ ಬ್ರಹ್ಮಾಸ್ತ್ರವನ್ನು ಪ್ರಯೋಗಿಸುವ ಮೂಲಕ ಬೆದರಿಕೆ ಹಾಕುತ್ತಿದೆ ಎಂದು ಸಿಎಂ ಹೇಳಿದರು. 

Advertisement

Udayavani is now on Telegram. Click here to join our channel and stay updated with the latest news.

Next