ಅಧಿಕಾರಿಗಳಿಗೆ ಸೂಚಿಸಿದರು.
Advertisement
ಗದಗ-ಬೆಟಗೇರಿ ನಗರಸಭೆ ಸಭಾಂಗಣದಲ್ಲಿ ಮಂಗಳವಾರ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಮೃತ್ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿರುವ ಒಳಚರಂಡಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಎಸ್‌ಟಿಪಿಯಲ್ಲಿ ಮಲೀನ ನೀರು ಸಂಗ್ರಹವಾಗದಂತೆ ಕ್ರಮ ಕೈಗೊಳ್ಳಬೇಕು. ಪಂಪಿಂಗ್ ಯಂತ್ರ ಸ್ಥಗಿತಗೊಳ್ಳದಂತೆ ನಿಗಾವಹಿಸಬೇಕು. ಸೀವೇಜ್‌ಗೆ ನೀರು ಸರಿಯಾಗಿ ಹರಿದು ಹೋಗುವಂತೆ ಚರಂಡಿಗಳ ಮುಖ್ಯಕೊಳವೆ ಮಾರ್ಗಗಳನ್ನು ಪುನಶ್ಚೇತನಗೊಳಿಸಬೇಕು. ಈಗಿರುವ ಸೀವರ್ ನೆಟ್‌ವರ್ಕ್‌ನ್ನು ಪುನರುಜ್ಜೀವನಗೊಳಿಸಬೇಕು ಎಂದರು.
ನಿಗದಿತ ಅವ ಧಿಯೊಳಗೆ ಕಾಮಗಾರಿ ಪೂರ್ಣಗೊಳ್ಳದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಂಸದರು, ನಗರದಲ್ಲಿ ಪ್ರತಿ ಮನೆಗೂ ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸಬೇಕು. ಇನ್ನುಳಿದ 25 ಕಿ.ಮೀ. ಪೈಪ್‌ಲೈನ್ ಕಾಮಗಾರಿಯನ್ನು ವಿಳಂಬ
ಮಾಡಬಾರದು ಎಂದು ಸೂಚಿಸಿದರು.
ಯೋಜನೆಯ ದುರಸ್ತಿ ಹಾಗೂ ನಿರ್ವಹಣೆಗಾಗಿ 158 ಕೋಟಿ ರೂ. ಮೀಸಲಿಡಲಾಗಿದ್ದು, ಕಾಮಗಾರಿ ಅಂತಿಮ ಹಂತದಲ್ಲಿದೆ. ಅಮೃತ್ ಯೋಜನೆಯ ಹೆಚ್ಚುವರಿ ಅನುದಾನದಡಿ ಹಾಲಿ ಸೀವರ್ ನೆಟ್ ವರ್ಕ್ ಪುನರುಜ್ಜೀವನಗೊಳಿಸಲು 2 ಕೋಟಿ ರೂ.
ಅನುದಾನದಲ್ಲಿ ಕಾಮಗಾರಿ ಪ್ರಾರಂಭಿಸಲಾಗಿದೆ ಎಂದರು. 2015-16ನೇ ಸಾಲಿನಿಂದ 2018-19ನೇ ಸಾಲಿನವರೆಗೆ ವಿವಿಧ ವಸತಿ ಯೋಜನೆಗಳಡಿ ಒಟ್ಟು 6,939 ಮನೆಗಳ ನಿರ್ಮಾಣ ಗುರಿ
ನಿಗದಿಪಡಿಸಲಾಗಿದ್ದು, ಅದರಲ್ಲಿ 944 ಮನೆಗಳು ಪೂರ್ಣಗೊಂಡಿವೆ. ಅದರಂತೆ, ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಗುಂಪು ವಸತಿ ಯೋಜನೆಯಡಿ 3,994 ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಪೌರಾಯುಕ್ತ ಮನ್ಸೂರ್ ಅಲಿ ತಿಳಿಸಿದರು.
ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾ ಧಿಕಾರದ ಅಧ್ಯಕ್ಷ ಸಂಗಮೇಶ ದುಂದೂರ, ಆಯುಕ್ತ ರಮೇಶ ಹಾಗೂ ವಿವಿಧ ಇಲಾಖೆಯ ಅಧಿ ಕಾರಿಗಳು ಸಭೆಯಲ್ಲಿದ್ದರು.