Advertisement

ಬಡವರ ಪರ ಶಿವಳ್ಳಿ ಕಾಳಜಿಯೇ ಕುಸುಮಾವತಿಗೆ ಶ್ರೀರಕ್ಷೆ

10:13 AM May 17, 2019 | Team Udayavani |

ಹುಬ್ಬಳ್ಳಿ: ಸಚಿವರಾಗಿದ್ದ ಸಿ.ಎಸ್‌. ಶಿವಳ್ಳಿ ಕುಂದಗೋಳ ಕ್ಷೇತ್ರದಲ್ಲಿ ಒಳ್ಳೆಯ ಕೆಲಸ ಮಾಡಿದ್ದಾರೆ. ಕ್ಷೇತ್ರದ ಬಡವರ ಪರವಾದ ಕಾಳಜಿ ಅವರ ಪತ್ನಿ ಕುಸುಮಾವತಿ ಅವರಿಗೆ ಶ್ರೀರಕ್ಷೆಯಾಗಲಿದೆ ಎಂದು ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.

Advertisement

ಯರಗುಪ್ಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಐದು ವರ್ಷಗಳ ಕಾಲ ತಮ್ಮ ಆಡಳಿತಾವಧಿಯಲ್ಲಿ ದೇಶದ ಯಾವ ರಾಜ್ಯಗಳಲ್ಲೂ ನೀಡದಷ್ಟು ಉತ್ತಮವಾದ ಕಾರ್ಯಗಳನ್ನು ಬಡವರಿಗೆ, ದಲಿತರಿಗೆ ನೀಡಿದ್ದಾರೆ. ಈ ಎಲ್ಲ ಯೋಜನೆಗಳನ್ನು ಎಚ್.ಡಿ. ಕುಮಾರಸ್ವಾಮಿ ಅವರು ಮುಂದುವರಿಸಿಕೊಂಡು ಹೊರಟಿದ್ದಾರೆ. ನಮ್ಮ ಸರಕಾರ ಅಧಿಕಾರದಲ್ಲಿದ್ದಾಗ ಹಾಗೂ ಇಂದಿನ ಮೈತ್ರಿ ಸರಕಾರ ರೈತರ ಸಾಲ ಮನ್ನಾ ಮಾಡಿದೆ. ಈ ನಾಡಿನ ಅನ್ನದಾತರ ಕಣ್ಣೀರು ಒರೆಸುವ ಕೆಲಸ ನಾವು ಮಾಡಿದ್ದೇವೆ ಎಂದರು.

ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಯಾವುದೇ ಜನಪರ ಕಾರ್ಯಗಳನ್ನು ನೀಡಿಲ್ಲ. ಈ ದೇಶದಲ್ಲಿ ಶಾಂತಿ ನೆಲೆಸುವ ಕಾರಣಕ್ಕೆ ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕು. ಬಿಜೆಪಿ ನಾಯಕರು ವಿವಾದಾತ್ಮಕ ಹೇಳಿಕೆಯಿಂದ ರಾಜಕಾರಣ ಮಾಡುತ್ತಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌, ಸಿದ್ದರಾಮಯ್ಯ ಅವರು ಒಗ್ಗೂಡಿಕೊಂಡು ಎಚ್.ಡಿ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದಾರೆ. ಬಿಜೆಪಿ ನಾಯಕರ ವಿವಾದಾತ್ಮಕ ಹೇಳಿಕೆಗಳಿಗೆ ನಾನು ಉತ್ತರಿಸಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next