Advertisement

ಕೋವಿಡ್ ವಾರಿಯರ್ಸ್ ಗೆ ಚಿಕಿತ್ಸೆ ನೀಡಲು ಶಿವಮೊಗ್ಗ ಖಾಸಗಿ ಆಸ್ಪತ್ರೆಗಳ ನಕಾರ‌!

05:24 PM Jul 16, 2020 | keerthan |

ಶಿವಮೊಗ್ಗ: ಜನರ ರಕ್ಷಣೆಗಾಗಿ ಹಗಲಿರುಳು ದುಡಿಯುವ ಕೋವಿಡ್ ವಾರಿಯರ್ಸ್ ಗೆ ಮುಖ್ಯಮಂತ್ರಿಗಳ ತವರು ಜಿಲ್ಲೆ ಶಿವಮೊಗ್ಗದಲ್ಲಿ ರಕ್ಷಣೆ ಇಲ್ಲದಂತಾಗಿದೆ. ಜ್ವರದಿಂದ ಬಳಲುತ್ತಿರುವ ಪೊಲೀಸ್ ಅಧಿಕಾರಿಗೆ ಚಿಕಿತ್ಸೆ ನೀಡಲು ಇಲ್ಲಿನ ಖಾಸಗಿ ಆಸ್ಪತ್ರೆಗಳು ಹಿಂದುಮುಂದು ನೋಡುತ್ತಿವೆ!

Advertisement

ಜಿಲ್ಲೆಯ 45 ವರ್ಷದ ಎಎಸ್ಐ ಒಬ್ಬರು ಜ್ವರ ಹಾಗೂ ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ ಅವರನ್ನು ಕೋವಿಡ್ ಟೆಸ್ಟ್ ಕಾರಣ ಹೇಳಿ ವಾಪಾಸ್ ಕಳುಹಿಸಲಾಗಿದೆ. ಇದರಿಂದ ಈ ಪೊಲೀಸ್ ಅಧಿಕಾರಿ ಬೇರೆ ಬೇರೆ ಆಸ್ಪತ್ರೆಗಳಿಗೆ ಅಲೆದಾಟ ನಡೆಸಬೇಕಾದ ಪರಿಸ್ಥಿತಿ ಎದುರಾಗಿದೆ.

ಇಂದು ಜಿಲ್ಲಾ ಡಿಎಆರ್ ಸಭಾಂಗಣದಲ್ಲಿ ನಡೆಯುತ್ತಿದ್ದ ಸಭೆಯಲ್ಲಿ ಪೊಲೀಸ್ ಅಧಿಕಾರಿಯು ಜಿಲ್ಲಾ ಉಸ್ತುವಾರಿ ಸಚಿವ ಕೆ ಎಸ್ ಈಶ್ವರಪ್ಪ ಬಳಿ ಕೋವಿಡ್ ವಾರಿಯರ್ಸ್ ಗೆ ಪ್ರತ್ಯೇಕ ಚಿಕಿತ್ಸೆ ಕಲ್ಪಿಸುವಂತೆ ಮನವಿ ಮಾಡಿದರು.

ಖಾಸಗಿ ಆಸ್ಪತ್ರೆಗಳು ಕೋವಿಡ್ ಚಿಕಿತ್ಸೆ ನೀಡಬೇಕೆಂದು ಸರ್ಕಾರ ಆದೇಶಿಸಿದ್ದರೂ, ಸರ್ಕಾರದ ಆದೇಶಕ್ಕೆ ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲೆ ಮನ್ನಣೆ ನೀಡುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next