ಸಾಗರ: ವೀಕೆಂಡ್ ಕರ್ಫ್ಯೂ ಇದ್ದಾಗಲೂ ಕಲ್ಯಾಣ ಮಂಟಪಗಳಲ್ಲಿ ಮದುವೆ ಕಾರ್ಯ ನಡೆಸಲು ಅಡ್ಡಿಯಿಲ್ಲ. ಆದರೆ ಸರ್ಕಾರದ ಕೊರೊನಾ ಮಾರ್ಗಸೂಚಿಯಂತೆ 50 ಜನಕ್ಕಿಂತ ಹೆಚ್ಚಿನ ಜನ ಸೇರುವಂತಿಲ್ಲ ಎಂದು ಸಾಗರ ಉಪವಿಭಾಗದ ಸಹಾಯಕ ಆಯುಕ್ತ ಡಾ. ನಾಗರಾಜ್ ಎಲ್. ತಿಳಿಸಿದ್ದಾರೆ.
ಇಲ್ಲಿನ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಕೊರೊನಾ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ಅ ಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶವ ಸಂಸ್ಕಾರ ಸಂದರ್ಭದಲ್ಲಿ 20 ಜನರನ್ನು ನಿಗದಿಗೊಳಿಸಲಾಗಿದ್ದು, ಹೆಚ್ಚುವರಿಯಾಗಿ ಐದು ಜನರು ಸೇರಿ 25 ಜನರು ಪಾಲ್ಗೊಳ್ಳಬಹುದು ಎಂದು ತಿಳಿಸಿದರು.
ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ ಜಾರಿಗೊಳಿಸಿರುವ ಕಾನೂನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುತ್ತದೆ. ವಾಹನ ಸಂಚಾರಕ್ಕೆ ಮುಕ್ತ ಅವಕಾಶವಿದ್ದು, ರಾತ್ರಿ ಬಸ್ ಸಂಚಾರ ಇರುತ್ತದೆ. ಸಭೆ, ಸಮಾರಂಭಗಳು, ರಾಜಕೀಯ ಕಾರ್ಯಕ್ರಮಗಳ ಮೇಲೆ ನಿರ್ಬಂಧ ಇರುತ್ತದೆ. ಆರೋಗ್ಯ ಸೇವೆ, ಕೃಷಿ ಚಟುವಟಿಕೆ ಅಬಾಧಿತವಾಗಿದ್ದು, ಜನರು ಅನಗತ್ಯವಾಗಿ ಹೊರಗೆ ತಿರುಗಬಾರದು. ಜತೆಗೆ ಮಾಸ್ಕ್ ಮತ್ತು ಸಾಮಾಜಿಕ ಅಂತರ ಪರಿಪಾಲನೆ ಕಡ್ಡಾಯವಾಗಿರುತ್ತದೆ ಎಂದರು.
ಉಪವಿಭಾಗೀಯ ಆಸ್ಪತ್ರೆಯಲ್ಲಿ ಮತ್ತು ಆರೋಗ್ಯ ಕೇಂದ್ರಗಳಲ್ಲಿ ಕೊರೊನಾ ತಪಾಸಣೆ ಮಾಡಿಸಿಕೊಂಡು ವರದಿ ಪಾಸಿಟಿವ್ ಬಂದ ತಕ್ಷಣ ´ೋನ್ ಸ್ವಿಚ್ ಆಫ್ ಮಾಡುವುದು, ತಪ್ಪಿಸಿಕೊಂಡು ತಿರುಗುವುದು ಮಾಡುತ್ತಿರುವ ಬಗ್ಗೆ ದೂರುಗಳಿವೆ. ಅಂತಹವರ ವಿಳಾಸ ಇರುವುದರಿಂದ ಪತ್ತೆ ಹಚ್ಚುವುದು ಕಷ್ಟವಿಲ್ಲ. ಅಂತಹವರ ಮನೆಗೆ ಆಂಬ್ಯುಲೆನ್ಸ್ ಕಳಿಸಿ ಅವರನ್ನು ಚಿಕಿತ್ಸೆಗೆ ಒಳಪಡಿಸುವ ಬಗ್ಗೆ ಚಿಂತನೆ ಮಾಡಲಾಗಿದೆ. ಏಕೆಂದರೆ ಅಂತಹವರಿಂದ ಇತರರಿಗೂ ಕೊರೋನಾ ಹರಡುವ ಸಾಧ್ಯತೆ ಇಲ್ಲದಿಲ್ಲ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಚಂದ್ರಶೇಖರ ನಾಯ್ಕ, ಪೌರಾಯುಕ್ತ ಎಚ್.ಕೆ.ನಾಗಪ್ಪ, ತಾಲೂಕು ಆರೋಗ್ಯಾ ಧಿಕಾರಿ ಡಾ.ಮೋಹನ್ ಕೆ.ಎಸ್., ಸಿವಿಲ್ ಸರ್ಜನ್ ಡಾ. ಪ್ರಕಾಶ್ ಬೋಸ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿ ಬಿಂಬ ಕೆ.ಆರ್., ಡಿವೈಎಸ್‌ಪಿ ವಿನಾಯಕ ಎನ್. ಶೆಟಿಗೇರ ಇನ್ನಿತರರು ಹಾಜರಿದ್ದರು.