Advertisement

ಕೊರೋನಾ ೆದುರಿಸಲು ಎಲ್ಲಾ ಅಗತ್ಯ ಕ್ರಮ

08:30 PM Apr 27, 2021 | Team Udayavani |

ಶಿವಮೊಗ್ಗ: ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಎದುರಿಸಲು ಸರ್ಕಾರದ ಮಟ್ಟದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದ್ದು, ಸಾರ್ವಜನಿಕರು ಮುಂಜಾಗೃತಾ ಕ್ರಮ ಅನುಸರಿಸುವ ಮೂಲಕ ಎಚ್ಚರಿಕೆ ವಹಿಸಬೇಕು ಎಂದು ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಮನವಿ ಮಾಡಿದರು. ಸೋಮವಾರ ಶಿವಮೊಗ್ಗ ಮೆಡಿಕಲ್‌ ಕಾಲೇಜಿನಲ್ಲಿ ಕೋವಿಡ್‌ ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳ ಕುರಿತು ಹಿರಿಯ ಅ ಧಿಕಾರಿಗಳು ಹಾಗೂ ವೈದ್ಯಾ ಧಿಕಾರಿಗಳ ಸಭೆ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

Advertisement

ಪ್ರಸ್ತುತ ಮೆಗ್ಗಾನ್‌ ಆಸ್ಪತ್ರೆಯಲ್ಲಿ 700 ರಿಂದ 800 ರವರೆಗೆ ಆಕ್ಸಿಜನ್‌ ಬೆಡ್‌ಗಳು ಕೋವಿಡ್‌ ರೋಗಿಗಳಿಗಾಗಿ ಲಭ್ಯವಿದೆ. ಪ್ರಸ್ತುತ 250 ಮಂದಿ ಕೋವಿಡ್‌ ರೋಗಿಗಳು ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೋವಿಡ್‌ ಹೊರತುಪಡಿಸಿ ಇತರ ರೋಗಿಗಳ ಚಿಕಿತ್ಸೆಗೂ ಯಾವುದೇ ತೊಂದರೆಯಾಗದಂತೆ ಸೌಲಭ್ಯಗಳನ್ನು ಬಳಸಿಕೊಳ್ಳಲು ಸೂಚಿಸಲಾಗಿದೆ. ರೋಗ ಲಕ್ಷಣ ಇಲ್ಲದವರನ್ನು ಹೋಂ ಕ್ವಾರೆಂಟೈನ್‌ಗೆ ಕಳುಹಿಸಲಾಗುತ್ತಿದೆ. ಚಿಕಿತ್ಸೆ ಅಗತ್ಯವಿರುವವರನ್ನು ಮಾತ್ರ ಮೆಗ್ಗಾನ್‌ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನೆರೆಯ ಜಿಲ್ಲೆಗಳಿಂದಲೂ ಕೋವಿಡ್‌ ರೋಗಿಗಳು ಚಿಕಿತ್ಸೆಗಾಗಿ ಆಗಮಿಸುತ್ತಿರುವುದರಿಂದ ಮೆಗ್ಗಾನ್‌ ಮೇಲೆ ಸ್ವಲ್ಪಮಟ್ಟಿನ ಒತ್ತಡ ಬೀಳುತ್ತಿದೆ. ಮೆಗ್ಗಾನ್‌ನಲ್ಲಿ ಆಕ್ಸಿಜನ್‌ ಪೂರೈಕೆಗೆ ಸದ್ಯ ಯಾವುದೇ ಕೊರತೆ ಇಲ್ಲ.

ಇಲ್ಲಿ 16 ಸಾವಿರ ಲೀಟರ್‌ ಆಕ್ಸಿಜನ್‌ ಸಂಗ್ರಹ ಟ್ಯಾಂಕ್‌ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಜಿಂದಾಲ್‌ನಿಂದ ಪ್ರತಿ ಎರಡು ದಿನಗಳಿಗೊಮ್ಮೆ ಅಗತ್ಯ ಆಕ್ಸಿಜನ್‌ ಪೂರೈಕೆ ಆಗುತ್ತಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ ಪ್ರತಿ ದಿನ 2ಸಾವಿರಕ್ಕೂ ಅಧಿ ಕ ಕೋವಿಡ್‌ ಪರೀಕ್ಷೆ ನಡೆಸಲಾಗುತ್ತಿದೆ. ನೆರೆಯ ಜಿಲ್ಲೆಗಳ ಸ್ಯಾಂಪಲ್‌ ಗಳನ್ನು ಸಹ ಇಲ್ಲಿಯೇ ಪರೀಕ್ಷೆಗೆ ಕಳುಹಿಸಿದ್ದರಿಂದ ಫಲಿತಾಂಶ ಬರಲು ವಿಳಂಬವಾಗುತ್ತಿದ್ದು, ಒಂದೆರಡು ದಿನಗಳಲ್ಲಿ ಇದು ಸುಧಾರಿಸಲಿದೆ. 24 ಗಂಟೆಯ ಒಳಗಾಗಿ ಫಲಿತಾಂಶ ಒದಗಿಸಲು ಸೂಚನೆ ನೀಡಲಾಗಿದೆ. ಪ್ರಸ್ತುತ ಮೆಗ್ಗಾನ್‌ನಲ್ಲಿ ಒಂದು ಸಿಟಿ ಸ್ಕಾನ್‌ ಲಭ್ಯವಿದ್ದು, ಅಗತ್ಯ ಬಿದ್ದರೆ ಖಾಸಗಿ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಹೆಚ್ಚಿನ ಸೌಲಭ್ಯ ಪಡೆದುಕೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next