Advertisement

ಪ್ರತಿ ತಾಲೂಕಲ್ಲಿ ಆಕ್ಸಿಜನ್‌ ಘಟಕ ಆರಂಭ

11:11 PM May 05, 2021 | Shreeraj Acharya |

ಶಿವಮೊಗ್ಗ: ಜಿಲ್ಲೆಯಲ್ಲಿ ಆಮ್ಲಜನಕದ ಕೊರತೆ ನೀಗಿಸಲು ಪ್ರತಿ ತಾಲೂಕಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಆಮ್ಲಜನಕ ಉತ್ಪಾದಕ ಘಟಕಗಳನ್ನು ಸ್ಥಾಪಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕೊರೊನಾ 2ನೇ ಅಲೆ ತೀವೃವಾಗಿ ಹಬ್ಬುತ್ತಿದ್ದು, ಆಮ್ಲಜನಕದ ಕೊರತೆಯಿಂದಾಗಿ ಸಾವಿರಾರು ಸೋಂಕಿತರು ಮೃತಪಡುತ್ತಿದ್ದು, ಆರೋಗ್ಯ ಕ್ಷೇತ್ರಕ್ಕೆ ಇದೊಂದು ಸವಾಲಾಗಿದೆ. ಜಿಲ್ಲೆಯಲ್ಲಿ ಆಮ್ಲಜನಕದ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಭದ್ರಾವತಿಯ ವಿಐಎಸ್‌ಎಲ್‌ ಕಾರ್ಖಾನೆಯಲ್ಲಿ ಕಳೆದ 2 ವರ್ಷಗಳಿಂದ ಸ್ಥಗಿತಗೊಂಡಿದ್ದ ಆಮ್ಲಜನಕ ಉತ್ಪಾದನಾ ಘಟಕವನ್ನು ಪುನರಾರಂಭಿಸಲು ಈಗಾಗಲೇ ಹಿಂದೆ ಉತ್ಪಾದಿಸುತ್ತಿದ್ದ ಕಂಪನಿಯ ಅಧಿ ಕಾರಿಗಳು ಹಾಗೂ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ತಾವು ಮಾತುಕತೆ ನಡೆಸಿದ್ದೇವೆ. 150 ಕೆ.ಎಲ್‌. ಆಮ್ಲಜನಕ ಉತ್ಪಾದಿಸಲು ನಿರ್ಧರಿಸಿದ್ದು, ಇನ್ನೆರಡು ದಿನದ ಬಳಿಕ ಉತ್ಪಾದನೆ ಆರಂಭಿಸುವುದಾಗಿ ಕಂಪನಿ ತಿಳಿಸಿದೆ. ಉತ್ಪಾದಿಸಿದ ಆಮ್ಲಜನಕವನ್ನು ಜಂಬೋ ಸಿಲಿಂಡರ್‌ಗೆ ತುಂಬಿಸಿ ವಿತರಣೆ ಮಾಡಲಿದೆ ಎಂದ ಅವರು, ಇದಕ್ಕೆ ಎಷ್ಟೇ ಖರ್ಚು ಬಂದರೂ ಸರ್ಕಾರ ನೀಡಲು ಸಿದ್ಧವಿದೆ ಎಂದರು.

ಕೊರೊನಾ ನಿಯಂತ್ರಣಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪನವರು ಪ್ರತಿ ತಾಲೂಕಿಗೆ ಭೇಟಿ ನೀಡಿ ಅ ಧಿಕಾರಿಗಳೊಂದಿಗೆ ಚರ್ಚಿಸಿ ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಸೌಲಭ್ಯ ಕೊರತೆಯಾಗದಂತೆ ಸೂಚನೆ ನೀಡಿದ್ದಾರೆ. ರಾಜ್ಯದ 4 ಕಡೆ ಪ್ರಕೃತಿದತ್ತ ಆಮ್ಲಜನಕ ಶೇಖರಣಾ ಘಟಕ ಸ್ಥಾಪಿಸಲು ಮಂಜೂರಾಗಿದ್ದು, ಶಿಕಾರಿಪುರದಲ್ಲೂ ಸಹ ಈ ಘಟಕ ಶೀಘ್ರದಲ್ಲೇ ಆರಂಭವಾಗಲಿದೆ ಎಂದರು.

ಪ್ರಪಂಚದಲ್ಲಿ ಈಗಾಗಲೇ ಕೊರೊನಾದ 3 ಮತ್ತು 4ನೇ ಅಲೆ ಕಾಣಿಸಿಕೊಂಡಿದ್ದು, ದೇಶದಲ್ಲೂ ಕಾಣಿಸಿಕೊಳ್ಳುವ ಸಂಭವ ವಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ರಾಜ್ಯದ ಪ್ರತಿ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ 50 ಹಾಸಿಗೆಗಳನ್ನು ಕೋವಿಡ್‌ ರೋಗಿಗಳಿಗಾಗಿ ಮೀಸಲಿಡಲು ಚಿಂತಿಸಲಾಗಿದೆ ಎಂದರು. ಕೋವಿಡ್‌ ನಿಯಂತ್ರಣಕ್ಕಾಗಿ ಸರ್ಕಾರದ ಮಾರ್ಗಸೂಚಿಗಳನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸಬೇಕು. ಔಷಧ ಬೇಕಾದವರು ಮಾತ್ರ ಹೊರಗೆ ಬಂದು ಔಷಧ ಖರೀದಿಸಬೇಕೆ ಹೊರತು ಮನೆಯಿಂದ ಯಾರೂ ಹೊರಗೆ ಬರದೆ ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

Advertisement

ಪತ್ರಿಕಾಗೋಷ್ಠಿಯಲ್ಲಿ ಮೇಯರ್‌ ಸುನಿತಾ ಅಣ್ಣಪ್ಪ, ಪ್ರಮುಖರಾದ ಎಸ್‌.ಎಸ್‌. ಜ್ಯೋತಿಪ್ರಕಾಶ್‌, ಡಿ.ಎಸ್‌.ಅರುಣ್‌, ಎಸ್‌ .ದತ್ತಾತ್ರಿ, ಎಸ್‌.ಜ್ಞಾನೇಶ್ವರ್‌, ಜಗದೀಶ್‌, ಕೆ.ಎಲ್‌. ಅಣ್ಣಪ್ಪ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next