ಶಿವಮೊಗ್ಗ: ಕೋವಿಡ್ ಎರಡನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ನಗರದ ವಾರ್ಡ್‌ಗಳ ಬೀದಿ ಬೀದಿಗಳಲ್ಲಿ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗುವುದು ಎಂದು ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಬುಧವಾರ ನಗರದ ಶಿವಪ್ಪನಾಯಕ ವೃತ್ತದ ಬಳಿ ಕೋವಿಡ್ ಪಡೆ, ಸೇವಾ ಭಾರತಿ ವತಿಯಿಂದ ಹಮ್ಮಿಕೊಳ್ಳ ಲಾಗಿದ್ದ ವಾರ್ಡ್‌ಗಳಿಗೆ ಸ್ಯಾನಿಟೈಸರ್ ಸಿಂಪಡಿಸುವ ಕಾರ್ಯಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಕಳೆದ ವರ್ಷ ಕೋವಿಡ್ ಪಡೆ ವತಿಯಿಂದ ಪ್ರತಿ ಮನೆಗೂ ಆಯುರ್ವೇದಿಕ್ ಕಿಟ್ ನೀಡಲಾಗಿತ್ತು. ಅದು ತುಂಬಾ ಯಶಸ್ವಿಯಾಗಿ ನಡೆದಿದ್ದು, ನಗರದ ಜನತೆಗೆ ಅನುಕೂಲವಾಗಿತ್ತು. ಅದರ ಮುಂದುವರೆದ ಭಾಗವಾಗಿ ನಗರದ ಬೀದಿಗಳಲ್ಲಿ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗುವುದು. ಇದಕ್ಕಾಗಿ 6 ವಾಹನಗಳು ಸಿದ್ಧವಾಗಿದ್ದು, 2- 3 ವಾರ್ಡ್‌ಗೆ ಒಂದರಂತೆ ವಾಹನದ ಮೂಲಕ ಸ್ಯಾನಿಟೈಸರ್ ಸಿಂಪಡಿಸಲಾಗುವುದು. 3 -4 ದಿನಗಳಲ್ಲಿ ಈ ಕಾರ್ಯ ಪೂರ್ಣಗೊಳ್ಳಲಿದೆ. ಇದು ಕೋವಿಡ್ ನಿಯಂತ್ರಿಸಲು ಸಹಕಾರಿಯಾಗಲಿದೆ ಎಂಬ ನಂಬಿಕೆ ಇದೆ ಎಂದರು.
ಆಮ್ಲಜನಕ ಕೊರತೆಯಾಗದಂತೆ ಕ್ರಮ: ಇದು ವರೆಗೂ ಆಕ್ಸಿಜನ್ ಕೊರತೆ ಆಗಿಲ್ಲ. ಆದರೆ, ಮುಂದಿನ ದಿನಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾದಂತೆ ಆಮ್ಲಜನಕ ಕೊರತೆ ಯಾಗಬಹುದೆಂಬ ಆತಂಕವಂತೂ ಕಾಡುತ್ತಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಆಮ್ಲಜನಕ ಕೊರತೆಯಾಗದಂತೆ ಮತ್ತು ಆಸ್ಪತ್ರೆಗಳಲ್ಲಿ ವೆಂಟಿಲೇಟರ್, ಬೆಡ್, ವೈದ್ಯರು ಹಾಗೂ ಸಿಬ್ಬಂದಿ ಕೊರತೆಯಾಗದಂತೆ ನೋಡಿಕೊಳ್ಳಲು ತೀರ್ಮಾನಿಸಲಾಗಿದ್ದು, ಉಸ್ತುವಾರಿ ಸಚಿವರಿಗೆ ಜವಾಬ್ದಾರಿ ವಹಿಸಲಾಗಿದೆ. ಈ ನಿಟ್ಟಿನಲ್ಲಿ ಜಿÇÉೆಯಲ್ಲಿ ಯಾವ ಕೊರತೆಯೂ ಆಗದಂತೆ ಕ್ರಮ ಕೈಗೊಳ್ಳಲಾಗಿದ್ದು, ಜನ ಆತಂಕ ಪಡಬೇಕಾಗಿಲ್ಲ ಎಂದರು.
ಇಡೀ ರಾಜ್ಯದಲ್ಲಿಯೇ ಆಕ್ಸಿಜನ್ ಕೊರತೆಯಾಗದಂತೆ ಮುಂಜಾಗ್ರತೆ ಕ್ರಮ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಜವಾಬ್ದಾರಿ ವಹಿಸಲಾಗಿದೆ. ಅದೇ ರೀತಿ ವಿವಿಧ ಸಚಿವರಿಗೆ ಜವಾಬ್ದಾರಿ ನೀಡಲಾಗಿದೆ ಎಂದರು.
ಶಿವಮೊಗ್ಗದಲ್ಲಿ ವ್ಯಾಕ್ಸಿನ್ ಕೊರತೆ ಇದೆ ಎಂಬ ಪ್ರಶ್ನೆಗೆ, ವ್ಯಾಕ್ಸಿನ್ ಲಭ್ಯತೆಯ ಆಧಾರದಲ್ಲಿ ನೀಡಲಾಗುತ್ತಿದೆ. ಎರಡನೇ ಡೋಸ್ ಹಾಕಿಸುವವರಿಗೆ ಪ್ರಾಶಸ್ತÂ ನೀಡಲಾಗುತ್ತಿದ್ದು, ಉಳಿದಂತೆ ವ್ಯಾಕ್ಸಿನ್ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು ಎಂದರು.