Advertisement
ಮಂಗಳವಾರ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ 72ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ, ಭದ್ರತಾ ತುಕಡಿಗಳ ಗೌರವ ವಂದನೆ ಸಲ್ಲಿಸಿದ ಬಳಿಕ ಅವರು ಮಾತನಾಡಿದರು.
ಭಾರತವನ್ನು ಅನಾವರಣಗೊಳಿಸುತ್ತಿದೆ. ಇದರ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ 400ಕ್ಕೂ ಅಧಿ ಕ ಕಾಮನ್ ಸರ್ವಿಸ್ ಸೆಂಟರ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರದ ಸೇವೆಗಳನ್ನು ಜನಸಾಮಾನ್ಯರು ಸುಲಭವಾಗಿ ಪಡೆಯಲು ಸಾಧ್ಯವಾಗಿದೆ ಎಂದರು.
Related Articles
Advertisement
ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ನಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಮನೆ ಮನೆಗೆ ಗಂಗೆ ಯೋಜನೆ ಮೂಲಕ ಪ್ರತಿಯೊಬ್ಬರ ಮನೆಗೂ ಶುದ್ಧ ಕುಡಿಯುವ ನೀರು ಒದಗಿಸುವ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದರು.ಇದೇ ಮೊದಲ ಬಾರಿಗೆ ಮೊಬೈಲ್ ಆ್ಯಪ್ ಮೂಲಕ, ರೈತರೇ ಸ್ವತಃ ತಮ್ಮ ಬೆಳೆ ಸಮೀಕ್ಷೆಯ ನಿಖರ ಮಾಹಿತಿಯನ್ನು ಒದಗಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಹಂಗಾಮಿನಲ್ಲಿ ಶೇ.100ರಷ್ಟು ಮತ್ತು ಹಿಂಗಾರು ಹಂಗಾಮಿನಲ್ಲಿ ಶೇ.75ರಷ್ಟು ಬೆಳೆ ಸಮೀಕ್ಷೆ ಪೂರ್ಣಗೊಳಿಸಲಾಗಿದೆ ಎಂದರು. ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ “ಒಂದು ಜಿಲ್ಲೆ ಒಂದು ಉತ್ಪನ್ನ’ ಎಂಬ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಜಿಲ್ಲೆಯಲ್ಲಿ ಅನಾನಸ್ ಉತ್ಪನ್ನವನ್ನು ಆಯ್ಕೆ ಮಾಡಲಾಗಿದ್ದು, ಉತ್ಪನ್ನದ ಬ್ರಾಂಡಿಂಗ್ ಮತ್ತು ಮಾರುಕಟ್ಟೆಗೆ ಹೆಚ್ಚಿನ ಉತ್ತೇಜನ ದೊರೆಯಲಿದೆ. ಕೈಗಾರಿಕೆಗಳ ಅಭಿವೃದ್ಧಿಗೆ ನಾವು ವಿಶೇಷ ಗಮನ ಹರಿಸಿದ್ದೇವೆ. ಸಾಗರ ರಸ್ತೆಯಲ್ಲಿರುವ ಕೈಗಾರಿಕಾ ವಸಾಹತಿನ ಮೂಲಸೌಕರ್ಯ ಉನ್ನತಿಗಾಗಿ 10 ಕೋಟಿ ರೂ. ಈಗಾಗಲೇ ಬಿಡುಗಡೆ ಮಾಡಲಾಗಿದೆ. ಕೈಗಾರಿಕೆಗಳಿಗೆ ಅಗತ್ಯವಾದ ರಸ್ತೆ, ಒಳಚರಂಡಿ, ವಿದ್ಯುತ್ ಸಂಪರ್ಕ ಸೇರಿದಂತೆ ಎಲ್ಲ ಅಗತ್ಯ ಸೌಲಭ್ಯಗಳನ್ನು ಇಲ್ಲಿ ಕಲ್ಪಿಸಲಾಗುತ್ತಿದೆ
ಎಂದರು. ಸಂಸದ ಬಿ.ವೈ. ರಾಘವೇಂದ್ರ, ಆರ್ಯವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್, ಎಂಎಲ್‌ಸಿ ಎಸ್. ರುದ್ರೇಗೌಡ, ಎಸ್.ಎಸ್. ಜ್ಯೋತಿಪ್ರಕಾಶ್, ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್, ಜಿಪಂ ಸಿಇಒ ಎಂ.ಎಲ್. ವೈಶಾಲಿ, ಎಸ್‌ಪಿ ಕೆ.ಎಂ. ಶಾಂತರಾಜು ಇತರರಿದ್ದರು. ಓದಿ : ಅಂಬೇಡ್ಕರ್ ವಿಶ್ವ ನಾಯಕ: ಶ್ರೀರಾಮುಲು