ಸೊರಬ: ಕೊರೊನಾ ಸೋಂಕನ್ನು ಆತ್ಮಸ್ಥೈರ್ಯದಿಂದ ಎದುರಿಸಬೇಕಿದ್ದು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಸೋಂಕು ತಗುಲದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಶಾಸಕ ಎಸ್. ಕುಮಾರ್ ಬಂಗಾರಪ್ಪ ಹೇಳಿದರು. ಪಟ್ಟಣದ ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡದಲ್ಲಿ ಭಾನುವಾರ ಆರಂಭಗೊಂಡ ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿ ಅವರು ಮಾತನಾಡಿದರು.
ಜನರ ಆರೋಗ್ಯದ ದೃಷ್ಟಿಯಿಂದ ಕೊರೋನಾ ಸೋಂಕು ಹರಡುವಿಕೆ ತಡೆಗಟ್ಟಲು ತಾಲೂಕು ಆಡಳಿತದಿಂದ ಕೈಗೊಳ್ಳುವ ನಿರ್ಧಾರಗಳಿಗೆ ಜನತೆ ಸಹಕಾರ ನೀಡಬೇಕು. ಈ ಹಿಂದೆ ಕೊರೊನಾ ಸೋಂಕಿತರ ಆರೈಕೆಗೆ ಶಿಕಾರಿಪುರ ಮತ್ತು ಶಿವಮೊಗ್ಗಕ್ಕೆ ತೆರಳುವ ಸ್ಥಿತಿ ಇತ್ತು. ಇದೀಗ ಪಟ್ಟಣದಲ್ಲಿ 100 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಮತ್ತು ಸಾರ್ವಜನಿಕ ಆಸ್ಪತ್ರೆಯಲ್ಲಿ 26 ಹಾಸಿಗೆಗಳ ಡಿಡಿಕೇಟೆಡ್ ಕೋವಿಡ್ ಹೆಲ್ತ್ ಸೆಂಟರ್ ಆರಂಭಿಸಲಾಗಿದೆ.
ಆನವಟ್ಟಿಯಲ್ಲೂ ಸಹ 21 ಹಾಸಿಗೆಗಳ ಡಿಡಿಕೇಟೆಡ್ ಕೋವಿಡ್ ಹೆಲ್ತ್ ಸೆಂಟರ್ ಶೀಘ್ರದಲ್ಲಿ ಆರಂಭವಾಗಲಿದೆ. ಸೋಂಕಿತರು ಧೃತಿಗೆಡುವ ಅಗತ್ಯವಿಲ್ಲ. ಆತ್ಮವಿಶ್ವಾಸ ಮತ್ತು ಧೈರ್ಯದಿಂದ ಎದುರಿಸಬೇಕು ಎಂದರು.
ಡಿಸಿಎಚ್ ಸೆಂಟರ್‌ನಲ್ಲಿ ಕೋರೊನಾ ಸೋಂಕಿತರಿಗೆ ಅತ್ಯಗತ್ಯವಿರುವ ಆಮ್ಲಜನಕ ವ್ಯವಸ್ಥೆ, ಬಿಸಿ ನೀರು, ಉತ್ತಮ ಆಹಾರದ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ ಎಂದ ಅವರು, ಗ್ರಾಮೀಣ ಭಾಗದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಗ್ರಾಮೀಣ ಜನರು ನಿರ್ಲಕ್ಷ್ಯ ವಹಿಸದೆ ಮುಂಜಾಗ್ರತೆ ವಹಿಸಬೇಕಿದೆ. ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸುವ ಮೂಲಕ ಸೋಂಕಿನ ವಿರುದ್ಧ ಹೋರಾಡಬೇಕು ಎಂದರು.
ತಹಶೀಲ್ದಾರ್ ಶಿವಾನಂದ ಪಿ. ರಾಣೆ, ತಾಲೂಕು ಆರೋಗ್ಯಾಧಿ ಕಾರಿ ಡಾ| ಅಕ್ಷತಾ ವಿ. ಖಾನಾಪುರ, ತಾಪಂ ಪ್ರಭಾರ ಇಒ ಕೆ.ಜೆ. ಕುಮಾರ್, ಹಿಂದುಳಿದ ವರ್ಗಗಳ ಇಲಾಖೆಯ ಕಲ್ಯಾಣಾಧಿ ಕಾರಿ ಕೆ.ಎಚ್. ಸದಾಶಿವ, ಸಹಾಯಕ ನಿರ್ದೇಶಕ ಇಕ್ಬಾಲ್ ಜಾತಿಗಾರ್, ಪಿಎಸ್‌ಐ ಟಿ.ಬಿ. ಪ್ರಶಾಂತ್ ಕುಮಾರ್, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾ ಧಿಕಾರಿ ಡಾ| ಶ್ವೇತಾ, ಪುರಸಭೆ ಅಧ್ಯಕ¡ ಎಂ.ಡಿ. ಉಮೇಶ್, ಪ್ರಭಾರ ಮುಖ್ಯಾ ಧಿಕಾರಿ ಶೆಲ್ಜಾ ನಾಯ್ಕ ಮತ್ತಿತರರಿದ್ದರು.