Advertisement

ಶುಭಮಂಗಳ ಕಲ್ಯಾಣ ಮಂಟಪ ಇಂದಿನಿಂದ ಕೋವಿಡ್‌ ಕೇರ್‌ ಸೆಂಟರ್‌

09:45 PM May 18, 2021 | Shreeraj Acharya |

ಶಿವಮೊಗ್ಗ: ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿರುವ ಕೊರೊನಾ ಸೋಂಕಿನಿಂದ ತತ್ತರಿಸಿರುವ ನಾಗರಿಕರ ನೆರವಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಮುಂದಾಗಿದ್ದಾರೆ. ಕಡಿಮೆ ರೋಗ ಲಕ್ಷಣಗಳನ್ನು ಹೊಂದಿರುವ ಕೋವಿಡ್‌ ಸೋಂಕಿತರಿಗಾಗಿ ಶುಭ ಮಂಗಳ ಕಲ್ಯಾಣ ಮಂಟಪವನ್ನು 100 ಹಾಸಿಗೆಗಳ ಕೋವಿಡ್‌ ಕೇರ್‌ ಸೆಂಟರ್‌ ಆಗಿ ಪರಿವರ್ತನೆ ಮಾಡಿದ್ದು, ಇದು ಮಂಗಳವಾರದಿಂದ ಆರಂಭಗೊಳ್ಳಲಿದೆ.

Advertisement

ಕಡಿಮೆ ರೋಗ ಲಕ್ಷಣಗಳನ್ನು ಹೊಂದಿರುವ ಸೋಂಕಿತರಿಗಾಗಿ ಈ ಕೋವಿಡ್‌ ಕೇರ್‌ ಸೆಂಟರನ್ನು ತೆರೆಯಲಾಗುತ್ತಿದ್ದು, ಉತ್ಕೃಷ್ಠ ದರ್ಜೆ ಸವಲತ್ತುಗಳನ್ನು ಇಲ್ಲಿ ಕಲ್ಪಿಸಲಾಗುತ್ತಿದೆ. ಇಲ್ಲಿ, ದಾಖಲಾಗುವ ರೋಗಿಗಳು ಮನೆಯಿಂದ ತಮ್ಮ ಬಟ್ಟೆಗಳನ್ನು ತಂದರೆ ಸಾಕು. ಇನ್ನುಳಿದಂತೆ ಉತ್ತಮ ಗುಣಮಟ್ಟದ ಹಾಸಿಗೆ, ಹೊದಿಕೆ, ಪೇಸ್ಟ್‌, ಬ್ರಷ್‌, ಸೋಪು, ಶಾಂಪು, ಶುಚಿ ಹಾಗೂ ರುಚಿಯಾದ ಉಪಾಹಾರ, ಊಟ, ಪೌಷ್ಠಿಕ ಆಹಾರ, ಶುದ್ಧ ಕುಡಿಯುವ ನೀರು ಸೇರಿದಂತೆ ಎಲ್ಲ ರೀತಿಯ ಸವಲತ್ತುಗಳನ್ನು ಕಲ್ಪಿಸಲಾಗುತ್ತಿದೆ. ವಿಶೇಷವೆಂದರೆ ಇಲ್ಲಿ ಸೋಂಕಿತರಿಗೆ ಒಮ್ಮೆ ನೀಡಲಾದ ಹಾಸುವ ಹಾಗೂ ಹೊದೆಯುವ ಹೊದಿಕೆಗಳನ್ನು ಮರುಬಳಕೆ ಮಾಡದೇ, ಹೊಸತನ್ನೇ ಬಳಸಲು ನಿರ್ಧರಿಸಲಾಗಿದೆ.

ಇನ್ನು, ಈ ಕೋವಿಡ್‌ ಕೇರ್‌ ಸೆಂಟರ್‌ಗೆ ಮೆಟ್ರೋ ಆಸ್ಪತ್ರೆಯ ಸಹಕಾರವಿದೆ. ಈ ಆಸ್ಪತ್ರೆಯ ವೈದ್ಯರು ಹಾಗೂ ನರ್ಸ್‌ಗಳು ಪ್ರತಿದಿನ ಮೂರು ಪಾಳಿಯಲ್ಲಿ ಇಲ್ಲಿಯೇ ಇದ್ದು ಕಾರ್ಯನಿರ್ವಹಿಸುತ್ತಾರೆ. ಇಲ್ಲಿ ದಾಖಲಾಗುವ ಕಡಿಮೆ ರೋಗ ಲಕ್ಷಣವಿರುವ ಸೋಂಕಿತರಿಗೆ ಅಗತ್ಯವಿರುವ ಎಲ್ಲ ರೀತಿಯ ವೈದ್ಯಕೀಯ ನೆರವು ದೊರೆಯಲಿದೆ. ಶುಭ ಮಂಗಳ ಟ್ರಸ್ಟ್‌ ವತಿಯಿಂದ ಈ ಕಲ್ಯಾಣ ಮಂಟಪವನ್ನು ಉಚಿತವಾಗಿ ಕೋವಿಡ್‌ ಕೇರ್‌ ಸೆಂಟರ್‌ಗೆ ನೀಡಲಾಗಿದೆ.

ಇನ್ನು, ಈ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ದಾಖಲಾಗುವ ಸೋಂಕಿತರಿಗೆ ಇಲ್ಲಿನ ಸೇವೆಗಳು ಸಂಪೂರ್ಣ ಉಚಿತವಾಗಿದ್ದು, ಇದರ ಎಲ್ಲ ಖರ್ಚು ವೆಚ್ಚಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ, ಜಿಪಂ ಸದಸ್ಯ ಕೆ.ಈ. ಕಾಂತೇಶ್‌ ಅವರು ಭರಿಸುತ್ತಿದ್ದಾರೆ. ಮಂಗಳವಾರದಿಂದ ಈ ಸೆಂಟರ್‌ ಕಾರ್ಯಾರಂಭ ಮಾಡಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಸಚಿವ ಈಶ್ವರಪ್ಪ ಹಾಗೂ ಜಿಪಂ ಸದಸ್ಯ ಕೆ.ಈ. ಕಾಂತೇಶ್‌ ಅವರುಗಳು ಶುಭ ಮಂಗಳ ಕಲ್ಯಾಣ ಮಂಟಪಕ್ಕೆ ಭೇಟಿ ನೀಡಿ, ಸಿದ್ಧತೆಗಳನ್ನು ಪರಿಶೀಲಿಸಿದರು.

ಕೊರೊನಾದ ಈ ಸಂಕಷ್ಟ ಕಾಲದಲ್ಲಿ ಸೋಂಕಿತರಿಗೆ ಬೆಡ್‌ ದೊರೆಯದೇ ಪರಿಪಾಟಲು ಪಡುತ್ತಿರುವ ಈ ಸಂದರ್ಭದಲ್ಲಿ ತಮ್ಮದೇ ಖರ್ಚಿನಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ಆರಂಭಿಸುತ್ತಿರುವ ಸಚಿವ ಈಶ್ವರಪ್ಪನವರ ಕಾರ್ಯ ನಿಜಕ್ಕೂ ಮಾದರಿಯಾದುದು.

Advertisement
Advertisement

Udayavani is now on Telegram. Click here to join our channel and stay updated with the latest news.

Next